Select Your Language

Notifications

webdunia
webdunia
webdunia
webdunia

ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ: ಉತ್ತರ ಪ್ರದೇಶ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ

ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ: ಉತ್ತರ ಪ್ರದೇಶ ನ್ಯಾಯಾಲಯಕ್ಕೆ ಹಾಜರಾದ ರಾಹುಲ್ ಗಾಂಧಿ

Sampriya

ಸುಲ್ತಾನ್‌ಪುರ , ಶುಕ್ರವಾರ, 26 ಜುಲೈ 2024 (15:52 IST)
Photo Courtesy X
ಸುಲ್ತಾನ್‌ಪುರ: ತಮ್ಮ ವಿರುದ್ಧದ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರಪ್ರದೇಶದ ಸುಲ್ತಾನ್ ಪುರದಲ್ಲಿ ಸಂಸದರ ಮತ್ತು ಶಾಸಕರ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಅರ್ಜಿದಾರರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ಹೇಳಿದ ನ್ಯಾಯಾಲಯವು, ಅರ್ಜಿ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದ್ದು, ಇದಕ್ಕೆ ರಾಹುಲ್ ಗಾಂಧಿ ಹಾಜರಾಗುವ ಅಗತ್ಯವಿಲ್ಲ ಎಂದು ಕೋರ್ಟ್ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ ವಿರುದ್ಧ ದಾಖಲಾದ ಪ್ರಕರಣ ಏನು: 2018ರಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಪ್ರಕರಣದ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ರಾಹುಲ್ ಗಾಂಧಿಗೆ ಸೂಚಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ನಾವು ಯಾರ ಜೊತೆಗೂ ಸಂಧಾನಕ್ಕೆ ರೆಡಿ ಇಲ್ಲ, ನಮ್ಮ ಸೊಸೆಗೆ ಒಂದು ಸರ್ಕಾರಿ ನೌಕರಿ ಕೊಡ್ಸಿ ಸಾಕು: ರೇಣುಕಾಸ್ವಾಮಿ ತಂದೆ ಕಣ್ಣೀರು