Select Your Language

Notifications

webdunia
webdunia
webdunia
webdunia

ತಮ್ಮ ಡಿಕೆ ಸುರೇಶ್‌ ಸೋಲು ನನ್ನ ವೈಯಕ್ತಿಕ ಸೋಲು: ಡಿಕೆಶಿ

dkc

sampriya

ಬೆಂಗಳೂರು , ಶುಕ್ರವಾರ, 7 ಜೂನ್ 2024 (15:37 IST)
ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ನನ್ನ ತಮ್ಮ  ಡಿಕೆ ಸುರೇಶ್‌ ಸೋಲು ನನ್ನ ವೈಯಕ್ತಿಕ ಸೋಲು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ʼಬೆಂಗಳೂರು ಗ್ರಾಮಾಂತರದ ಚುನಾವಣೆಯ ವಿಷಯದಲ್ಲಿ ನಾನು ಅತಿಯಾದ ಆತ್ಮವಿಶ್ವಾಸದಲ್ಲಿದ್ದೆ. ಅದು ಹುಸಿಯಾಗಿದೆ. ಈ ರೀತಿಯ ಸೋಲು ನಿರೀಕ್ಷಿಸಿರಲಿಲ್ಲʼ ಬೇಸರ ವ್ಯಕ್ತಪಡಿಸಿದರು.

ʼಲೋಕಸಭೆ ಚುನಾವಾಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು ತಂತ್ರಗಾರಿಕೆ ಫಲಿಸಿದೆ. ಮಂಜುನಾಥ್‌ ಅವರನ್ನು ಜೆಡಿಎಸ್‌ ಬದಲಾಗಿ ಬಿಜೆಪಿಯಿಂದ ಅಭ್ಯರ್ಥಿ ಕಣಕ್ಕಿಳಿಸಿ ಅವರ ತಂತ್ರಗಾರಿಕೆ ಫಲಿಸಿದೆ.  ನಮಗೆ ಮಾಗಡಿ ಮತ್ತು ರಾಮನಗರದಲ್ಲಿ ಒಳ್ಳೆಯ ಮುನ್ನಡೆ ಸಿಕ್ಕಿದೆ. ಕನಕಪುರದಲ್ಲಿ 60,000 ಮತಗಳ ಮುನ್ನಡೆ ನಿರೀಕ್ಷಿಸಿದ್ದೆ. ಆದರೆ, 20,000 ಮತಗಳ ಮುನ್ನಡೆ ಮಾತ್ರ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿಗೆ ಬೆಂಗಳೂರು ದಕ್ಷಿಣ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಒಳ್ಳೆಯ ಮುನ್ನಡೆ ಸಿಕ್ಕಿದೆ. ಹೀಗಾಗಿ ಅವರು ಗೆದ್ದರುʼ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸರಿಯಾದ ಸಮಯದಲ್ಲಿ ಮೋದಿ ಸರಿಯಾದ ನಾಯಕ: ಟಿಡಿಪಿಯ ಚಂದ್ರಬಾಬು ನಾಯ್ಡು