Publish Date: Wed, 27 Mar 2019 (20:00 IST)
Updated Date: Wed, 27 Mar 2019 (20:02 IST)
ಮುಖ್ಯಮಂತ್ರಿ ವಿರುದ್ಧ ಕಾಂಗ್ರೆಸ್ಸಿಗರು ಇನ್ನಿಲ್ಲದಂತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಂಡ್ಯದಲ್ಲಿ ಕಳೆದ ನಗರಸಭೆ ಚುನಾವಣೆಯಲ್ಲಿ ಸೋತ ಕಾಂಗ್ರೆಸ್ ಅಭ್ಯರ್ಥಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಮೊನ್ನೆಯಷ್ಟೆ ಮಂಡ್ಯಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. ಮಾತುಕತೆ ವೇಳೆ ನಿಖಿಲ್ ರನ್ನ ಬೆಂಬಲಿಸುವಂತೆ ಮನವಿ ಮಾಡಲಾಗಿದೆ.
ಮಂಡ್ಯ ನಗರದ ಕಾಂಗ್ರೆಸ್ ಜಿಲ್ಲಾ ಖಜಾಂಚಿ ಅಶೋಕ್ ಮನೆಗೆ ಭೇಟಿ ನೀಡಿದ್ದ ವೇಳೆ ಮಾತುಕತೆ ನಡೆದಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿರುವಂತೆ ಮನವಿ ಮಾಡಲಾಗಿತ್ತು. ಆದರೆ ನಾಮಪತ್ರ ದಿನ ಕಾಂಗ್ರೆಸ್ ನಾಯಕರನ್ನು ಕಡೆಗಣನೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ನಾಯಕರ ಕಡೆಗಣನೆ ವಿರೋಧಿಸಿ ಸುಮಲತಾ ಬೆಂಬಲಿಸಲು ನಿರ್ಧಾರವನ್ನು ಕೈ ನಾಯಕರು ಮಾಡಿದ್ದಾರೆ.
ಸಿಎಂ ಅವಶ್ಯಕತೆ ಇದ್ದಾಗ ಮಾತ್ರ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ ಅಂತಾ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ನಡೆ ವಿರೋಧಿಸಿ ಅಶೋಕ ನಗರದ ಚಂದ್ರು ನಿವಾಸದಲ್ಲಿ ನಡೆದ ಸಭೆಯಲ್ಲಿ ಸುಮಲತಾ ಬೆಂಬಲಿಸಲು ನಿರ್ಣಯ ಕೈಗೊಳ್ಳಲಾಗಿದೆ.