Daily Horoscope
✕

‘ಆ ಕೆಲಸ ಮಾಡಿದ ಪೊಲೀಸರಿಗೆ ಧಿಕ್ಕಾರ ಧಿಕ್ಕಾರ’

Webdunia
ಮಂಗಳವಾರ, 17 ಡಿಸೆಂಬರ್ 2019 (18:28 IST)
ದೆಹಲಿಯಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿದ ಗುಂಡಿನ ದಾಳಿಯನ್ನು ವಿರೋಧಿಸಿ ಧಿಕ್ಕಾರ ಕೂಗಲಾಗಿದೆ.

ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಧಾರವಾಡ ನಗರದ ಕಡಪಾ ಮೈದಾನದಿಂದ ಹೊರಟ ಪ್ರತಿಭಟನಾ ರ್ಯಾಲಿಯು ವಿವೇಕಾನಂದ ವೃತ್ತವನ್ನು ಸುತ್ತು ಹಾಕಿ ಮತ್ತೆ ಕಡಪಾ ಮೈದಾನಕ್ಕೆ ತಲುಪಿತು. ದೇಶಾದ್ಯಂತ ವಿರೋಧಿಸಲ್ಪಡುತ್ತಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಮತ್ತು ಅಲಿಘರ ಮುಸ್ಲಿಂ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಕೂಡಾ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು.

ಆ ವೇಳೆ ಕಿಡಿಗೇಡಿಗಳು ಮಾಡಿದ ಗಲಿಬಿಲಿಯಿಂದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಗೋಲಿಬಾರ್ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದು ವಿದ್ಯಾರ್ಥಿಗಳ ಚಳುವಳಿಯಲ್ಲಿ ಕರಾಳ ದಿನವಾಗಿದೆ. ಅದಕ್ಕಾಗಿ ಈ ದಾಳಿಗೆ ಹೊಣೆಗಾರರಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಮತ್ತು ಎಐಡಿಎಸ್ಓ ಸಂಘಟಕರು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments