ಬೆಂಗಳೂರು: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಅಮೀರ್ ರಶೀದ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ 10 ದಿನಗಳ ಕಸ್ಟಡಿಗೆ ಕಳುಹಿಸಿದೆ.
ಉಮರ್ ಮುಹಮ್ಮದ್ ನಬಿ ಜೊತೆ ಸಂಚು ರೂಪಿಸಿದ ಆರೋಪಿ ಕಾಶ್ಮೀರದ ನಿವಾಸಿ ಅಲಿಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಆತನನ್ನು ಕಸ್ಟಡಿಯಲ್ಲಿಡಲು ಎನ್‌ಐಎ ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.
ಎನ್‌ಐಎ ನಿನ್ನೆ ಅಲಿಯನ್ನು ಬಂಧಿಸಿದ್ದು, ದಾಳಿಗೆ ಬಳಸಿದ ಕಾರನ್ನು ಅವರ ಹೆಸರಿನಲ್ಲಿ ನೋಂದಾಯಿಸಲಾಗಿದೆ. ವ್ಯಾಪಕ ಶೋಧ ಕಾರ್ಯಾಚರಣೆ ವೇಳೆ ದೆಹಲಿಯಲ್ಲಿ ಆತನನ್ನು ಬಂಧಿಸಲಾಯಿತು.
ಎನ್‌ಐಎ ದೆಹಲಿ ಪೊಲೀಸರು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಹರಿಯಾಣ ಪೊಲೀಸರು, ಉತ್ತರ ಪ್ರದೇಶ ಪೊಲೀಸರು ಮತ್ತು ಹಲವಾರು ಕೇಂದ್ರ ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದು, ಹಲವು ರಾಜ್ಯಗಳಲ್ಲಿ ತನ್ನ ತನಿಖೆಯನ್ನು ಮುಂದುವರೆಸಿದೆ.
ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ ಶೇಖ್ ಹಸೀನಾ ಪ್ರಕರಣದಲ್ಲಿ ಇಂದು ತೀರ್ಪು ನೀಡಲಿದೆ.