Select Your Language

Notifications

webdunia
webdunia
webdunia
webdunia

ಉದ್ದೇಶಪೂರ್ವಕವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ

Vijayendra
belagavi , ಸೋಮವಾರ, 11 ಡಿಸೆಂಬರ್ 2023 (16:00 IST)
ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಭದ್ರಾವತಿಯಲ್ಲಿ ಬಿಜೆಪಿ ಮುಖಂಡನ‌ ಮೇಲಿನ ಹಲ್ಲೆಗೆ ಸಾಮಾಜಿಕ ಜಾಲತಾಣದಲ್ಲಿ ವಿಜಯೇಂದ್ರ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರ್ಗಿ, ಬೆಳಗಾವಿಯ ಪ್ರಕರಣಗಳ ಬೆನ್ನಲೇ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ಗೂಂಡಾಗಳ ಹಲ್ಲೆ ಆತಂಕಕಾರಿ ಘಟನೆಯಾಗಿದೆ.

ಭದ್ರಾವತಿಯಲ್ಲಿ ನಡೆಯುತ್ತಿರುವ ದಂಧೆಗಳಲ್ಲಿ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿರುವಂತಿದೆ. ತಕ್ಷಣವೇ ಭದ್ರಾವತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಕಾರ್ಯಕರ್ತನಿಗೆ ರಕ್ಷಣೆ ನೀಡಿ, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿ ಮತ್ತು ಕಂಡಕ್ಟರ್ ನಡುವೆ ಗಲಾಟೆ