Publish Date: Sat, 03 Feb 2024 (16:20 IST)
Updated Date: Sat, 03 Feb 2024 (16:32 IST)
ದಾವಣಗೆರೆ : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಗಳ ಪಟ್ಟಿ ಆದಷ್ಟು ಶೀಘ್ರದಲ್ಲಿಯೇ ಸಿದ್ಧವಾಗಲಿದೆ ಎಂದರು.ಪ್ರತಿ ಲೋಕಸಭಾ ಕ್ಷೇತ್ರದಲ್ಲಿಯೂ ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಕಾರ್ಯಕರ್ತರ ಅಭಿಪ್ರಾಯವನ್ನೂ ಕೇಳಲಾಗಿದ್ದು, ಈ ಕುರಿತು ಸಮೀಕ್ಷೆ ನಡೆಯುತ್ತಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗನಿಗೆ ಟಿಕೆಟ್ ಕೊಡಿವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಕೂಡ ಒಬ್ಬ ಟಿಕೆಟ್ ಆಕಾಂಕ್ಷಿಯಾಗಿ ಕೇಳುತ್ತಾರೆ. ಕಾಂಗ್ರೆಸ್ ನಲ್ಲಿ ಟಿಕೆಟ್ ಕೇಳುವವರೇ ಸಂಖ್ಯೆ ಜಾಸ್ತಿಯಿರುತ್ತದೆ. ಸ್ಥಳೀಯ ನಾಯಕರು, ಬ್ಲಾಕ್ ಸಮಿತಿ ಅಧ್ಯಕ್ಷ ರು, ಶಾಸಕರು, ಸಂಸದರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.