Select Your Language

Notifications

webdunia
webdunia
webdunia
webdunia

ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹ

ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹ
bangalore , ಸೋಮವಾರ, 24 ಜುಲೈ 2023 (18:01 IST)
ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಬಿಡುಗಡೆ ಮಾಡಿದ್ದು, ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಅದನ್ನು ಬಿಟ್ಟು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರ ಅಭಿಮಾನಿ, KPCC ಕಾರ್ಯದರ್ಶಿ ವರುಣ ಮಹೇಶ್ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರದಿಂದ ಅನ್ನಭಾಗ್ಯ ದೋಖಾ!