Select Your Language

Notifications

webdunia
webdunia
webdunia
webdunia

ತಿರುಪತಿ ಲಡ್ಡು ಪ್ರಕರಣ ಬೆನ್ನಲ್ಲೇ ನಂದಿನಿ ತುಪ್ಪಕ್ಕೆ ಹೆಚ್ಚಿದ ಡಿಮ್ಯಾಂಡ್‌

Nandini Ghee

Sampriya

ಬೆಂಗಳೂರು , ಭಾನುವಾರ, 22 ಸೆಪ್ಟಂಬರ್ 2024 (13:17 IST)
ಬೆಂಗಳೂರು: ತಿರುಪತಿ ಲಡ್ಡು ಪ್ರಕರಣದಿಂದ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗಿರುವ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್‌ ನಂದಿನಿ ತುಪ್ಪಕ್ಕೆ ಭಾರೀ ಬೇಡಿಕೆ ಹೆಚ್ಚಾಗಿದೆ.

ತಿರು‍ಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬೆರೆಯಾಗಿರುವ ಲ್ಯಾಬ್ ವರದಿಯಲ್ಲಿ ದೃಢಪಟ್ಟ ಬೆನ್ನಲ್ಲೇ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇದರ ನಡುವೆ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್‌ಗೆ ಟಿಟಿಡಿ ಮನವಿ ಮಾಡಿದೆ. ಇ-ಮೇಲ್​​​ ಮೂಲಕ KMFಗೆ ಮನವಿ ಸಲ್ಲಿಸಿದೆ.

ಅದಲ್ಲದೆ ರಾಜ್ಯದಲ್ಲಿ ದತ್ತಿ ಇಲಾಖೆಯ ದೇಗುಲಗಳಲ್ಲಿ ಪ್ರಸಾದ ತಯಾರು ಮಾಡಲು ನಂದಿನಿ ತುಪ್ಪ ಬಳಸುವಂತೆ ಆದೇಶ ಹೊರಡಿಸಲಾಗಿದೆ. ರಾಜ್ಯದ ಮುಜರಾಯಿ ದೇಗುಲಗಳಿಗೆ ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ನಡೆಯುತ್ತಿದೆ. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಮಹಿಳೆ ಕೊಲೆ ಪ್ರಕರಣ: ಆರೋಪಿ ಪತ್ತೆಗೆ 8 ತಂಡಗಳ ರಚನೆ