Select Your Language

Notifications

webdunia
webdunia
webdunia
webdunia

ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಬಿಜೆಪಿಯಿಂದ ಉಚ್ಛಾಟಿಸಲು ಆಗ್ರಹ

ಬಿಜೆಪಿ
ಕೇಂದ್ರ ಮಾಜಿ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಬಸನಗೌಡ ಪಾಟೀಲ್ ಯತ್ನಾಳ ಅವರು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ವಿರುದ್ಧ ವಿನಾಕಾರಣ ಇಲ್ಲ ಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ,  ರಾಜ್ಯ ಮುಖಂಡರು ಯತ್ನಾಳ ಅವರನ್ನು ತಕ್ಷಣ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ವಿಜಯಪುರ ಮಾದಿಗ ಸಂಘಟನೆಗಳ ಒಕ್ಕೂಟ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ.
ಮಾದಿಗ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಸಾಯಿಕುಮಾರ ಬಿಸನಾಳ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ಇದೇ ತಿಂಗಳ ಹನ್ನೆರಡರಂದು ಬೆಳಗಾವಿಯಲ್ಲಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಯತ್ನಾಳ ವಿರುದ್ಧ  ಕ್ರಮ ಕೈಗೊಳ್ಳಲು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಂಗೋತ್ಸವ ಸಂಭ್ರಮ ನಡೆದದ್ದೆಲ್ಲಿ ಗೊತ್ತಾ?