ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪಾಲನೆ ಅನಿವಾರ್ಯವಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತಮಿಳುನಾಡಿಗೆ ನೀರು ಹರಿಸಿದೆ ಎಂದು ಸಚಿವ ರಮೇಶ್ ಕುಮಾರ್ ಸಮರ್ಥನೆ ನೀಡಿದ್ದಾರೆ.
ಮಂಗಳೂರು ನಗರದಲ್ಲಿರುವ ಆಹಾರ ಹಾಗೂ ನಾಗರಿಕ ಪೊರೈಕೆ ಸಚಿವ ಯು.ಟಿ.ಖಾದರ್ ಅವರ ನಿವಾಸಕ್ಕೆ ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಅಂತಿಮ. ಹಾಗಿರುವಾಗ ಕೋರ್ಟ್ ಆದೇಶ ಪಾಲಿಸಬೇಕು ಎಂದರು.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಇದು ಮಧ್ಯಂತರ ತೀರ್ಪು ಆಗಿರುವುದೆ. ಈ ಕುರಿತು ಸೆಪ್ಟೆಂಬರ್ 20 ರಂದು ಮತ್ತೆ ವಿಚಾರಣೆ ನಡೆಯಲಿದೆ. ಅಂತಿಮ ತೀರ್ಪು ರಾಜ್ಯದ ಪರವಾಗಿ ಬರುವ ವಿಶ್ವಾಸವಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹರೀಶ್ ಸಾಂತ್ವನ ಯೋಜನೆ ವಿಫಲವಾಗುತ್ತಿದೆಯೇ ಎಂದು ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರದ ಯಾವುದೇ ಯೋಜನೆಗಳು ವಿಫಲವಾಗುವುದಿಲ್ಲ. ಆದರೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಹೊಸ ಆರೋಗ್ಯ ನೀತಿ ತರಲು ಚಿಂತಿಸಲಾಗುತ್ತಿದೆ ಎಂದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ