ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇದೊಂದು 'ಸಾಂಕ್ರಾಮಿಕ ರೋಗ' ಎಂದು ಸರ್ಕಾರ ಘೋಷಿಸಿದೆ.
ಡೆಂಗ್ಯೂ ಆರ್ಭಟವನ್ನು ನಿಯಂತ್ರಿಸಲು ದಂಡಾಸ್ತ್ರಕ್ಕೆ ಸರ್ಕಾರ ಮುಂದಾಗಿದೆ. ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಕಾಯ್ದೆಯನ್ನು ತಿದ್ದುಪಡಿ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ. ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ರಾಜ್ಯದಲ್ಲಿ ಸೋಮವಾರ ಹೊಸದಾಗಿ 147 ಮಂದಿ ಈ ಜ್ವರ ಪೀಡಿತರಾಗಿರುವುದು ಶುಕ್ರವಾರ ದೃಢಪಟ್ಟಿತ್ತು.
ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ 24 ಗಂಟೆಗಳ ಅವಧಿಯಲ್ಲಿ 1,138 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ 5 ಮಂದಿ ಒಂದು ವರ್ಷದೊಳಗಿನವರಾದರೆ, 35 ಮಂದಿ ಒಂದರಿಂದ 18 ವರ್ಷದೊಳಗಿನವರಾಗಿದ್ದಾರೆ. 107 ಮಂದಿ 18 ವರ್ಷ ಮೇಲ್ಪಟ್ಟವರಾಗಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 25,408 ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 23,827 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಾದ್ಯಂತ 1,569 ಸಕ್ರಿಯ ಡೆಂಗಿ ಪ್ರಕರಣಗಳಿವೆ.