Publish Date: Tue, 11 Jul 2023 (15:00 IST)
Updated Date: Tue, 11 Jul 2023 (16:56 IST)
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಡೆಂಘಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಈ ತಿಂಗಳು 5 ದಿನಗಳಲ್ಲಿ 172 ಮಂದಿ ಡೆಂಘಿ ಜ್ವರದಿಂದ ಬಳಲಿದ್ದಾರೆ.. ಈ ವರ್ಷ ಈಗಾಗಲೇ 41 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ..ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 2,432ಕ್ಕೆ ತಲುಪಿದೆ. ಕಳೆದ ವರ್ಷ 9,620 ಮಂದಿ ಡೆಂಗಿ ಜ್ವರದಿಂದ ಬಳಲಿದ್ದರು. ಅವರಲ್ಲಿ ಒಂಬತ್ತು ಮಂದಿ ಜ್ವರದ ತೀವ್ರತೆಗೆ ಮೃತಪಟ್ಟಿರುವುದು ದೃಢಪಟ್ಟಿತ್ತು.