ರಾಜ್ಯದಲ್ಲಿ ಎಡೆ ಬಿಡದೆ ಸುರಿಯುತ್ತಿರುವ ಮಳೆಗೆ ಏರಿಕೆಯತ್ತ ಡೆಂಗಿ ಚಿಕುನ್‌ಗುನ್ಯಾ ಪ್ರಕರಣಗಳು

Webdunia
ಶನಿವಾರ, 16 ಅಕ್ಟೋಬರ್ 2021 (21:46 IST)
ಬೆಂಗಳೂರು: ರಾಜ್ಯದಲ್ಲಿ ಎಡೆ ಬಿಡದೆ ಸುರಿಯುತ್ತಿರುವ  ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಜ್ವರಕ್ಕೆ ಒಳಪಡುವವರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ.  ಕಳೆದ 15 ದಿನಗಳಲ್ಲಿ 776 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆ  ತಿಳಿಸಿದೆ. 
 
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ವರದಿಯಾಗಿವೆ. 16 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 100 ರ ಗಡಿ ದಾಟಿದೆ. ಈ ವರ್ಷ ಮೊದಲ ಆರು ತಿಂಗಳ ಅವಧಿಯಲ್ಲಿ ಡೆಂಗಿ ನಿಯಂತ್ರಣದಲ್ಲಿತ್ತು. ಮಳೆ ಹೆಚ್ಚಳವಾದ ಬಳಿಕ ಈ ಜ್ವರಕ್ಕೆ ಒಳಪಡುವವರ ಸಂಖ್ಯೆ ಏರುಗತಿ ಪಡೆದುಕೊಂಡಿದೆ ಎಂದು ಇಲಾಖೆ ಮಾಹಿತಿ ನೀಡಿದೆ. 
 
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈ ವರ್ಷ ರಾಜ್ಯದಲ್ಲಿ ಯಾವುದೇ ಡೆಂಗಿ ಮರಣ ಪ್ರಕರಣ ವರದಿಯಾಗಿಲ್ಲ. ಆದರೆ, ಈ ಜ್ವರ ಎದುರಿಸಿದವರ ಸಂಖ್ಯೆ 4,287ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ 3,823 ಮಂದಿಯಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿತ್ತು. ಅವರಲ್ಲಿ 5 ಮಂದಿ ಮೃತಪಟ್ಟಿದ್ದರು ಎಂದಿದೆ. 
 
ಈ ವರ್ಷ ರಾಜಧಾನಿಯಲ್ಲಿ  ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದು, 756 ಮಂದಿಗೆ  ಡೆಂಗಿ ಜ್ವರ ಕಾಣಿಸಿಕೊಂಡಿದೆ. ಕಲಬುರಗಿಯಲ್ಲಿ- 338, ಉಡುಪಿಯಲ್ಲಿ- 312, ಶಿವಮೊಗ್ಗದಲ್ಲಿ- 305, ಕೊಪ್ಪಳದಲ್ಲಿ- 220, ದಕ್ಷಿಣ ಕನ್ನಡದಲ್ಲಿ- 206, ದಾವಣಗೆರೆಯಲ್ಲಿ- 209, ಬಳ್ಳಾರಿಯಲ್ಲಿ- 200, ವಿಜಯಪುರದಲ್ಲಿ- 190, ಹಾವೇರಿಯಲ್ಲಿ- 169, ಮಂಡ್ಯದಲ್ಲಿ- 161, ಗದಗದಲ್ಲಿ- 127, ಯಾದಗಿರಿಯಲ್ಲಿ- 122, ಬೀದರ್‌ನಲ್ಲಿ- 120, ತುಮಕೂರಿನಲ್ಲಿ- 117 ಹಾಗೂ ಚಿತ್ರದುರ್ಗದಲ್ಲಿ- 113 ಮಂದಿ ಡೆಂಗಿ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗೆ ಇವೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 
 
ಚಿಕುನ್‌ಗುನ್ಯಾ ಪ್ರಕರಣಗಳು: 
 
ರಾಜ್ಯದ 27 ಜಿಲ್ಲೆಗಳಲ್ಲಿ ಚಿಕುನ್‌ಗುನ್ಯಾ ಪ್ರಕರಣಗಳು ಕೂಡ ವರದಿಯಾಗಿವೆ. ಈವರೆಗೆ ಈ ಮಾದರಿಯ ಜ್ವರಕ್ಕೆ ಒಳಗಾದವರ ಸಂಖ್ಯೆ 1,415ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ, ರಾಯಚೂರು ಹಾಗೂ ದಕ್ಷಿಣ ಕನ್ನಡ ಬಿಟ್ಟು ಉಳಿದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರಕರಣಗಳು ಖಚಿತಪಟ್ಟಿವೆ. ಕಲಬುರಗಿ- 185, ಶಿವಮೊಗ್ಗ- 169, ಕೋಲಾರ- 108, ತುಮಕೂರು- 104 ಹಾಗೂ ಯಾದಗಿರಿ- 103, ಬೆಂಗಳೂರು ನಗರ 100 ಜಿಲ್ಲೆಯಲಗಳಲ್ಲಿ ಅಧಿಕ ಪ್ರಕರಣಗಳು ವರದಿಯಾಗಿದೆ, ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗಡೆ ಇವೆ ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ಮುಂದಿನ ಸುದ್ದಿ
Show comments