Select Your Language

Notifications

webdunia
webdunia
webdunia
webdunia

ವೃತ್ತಿ ಕಿರುಕುಳವೇ ಆತ್ಮಹತ್ಯೆಗೆ ಕಾರಣ:ಸಿಐಡಿಯಿಂದ ಸ್ಫೋಟಕ ವರದಿ

ವೃತ್ತಿ ಕಿರುಕುಳವೇ ಆತ್ಮಹತ್ಯೆಗೆ ಕಾರಣ:ಸಿಐಡಿಯಿಂದ ಸ್ಫೋಟಕ ವರದಿ
ಬೆಂಗಳೂರು , ಶುಕ್ರವಾರ, 15 ಜುಲೈ 2016 (18:16 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ವೃತ್ತಿ ಕಿರುಕುಳ ಕಾರಣವೇ ಹೊರತು ಕೌಟುಂಬಿಕ ಕಲಹವಲ್ಲ ಎಂದು ಸಿಐಡಿ ಅಧಿಕಾರಿಗಳು ಸ್ಫೋಟಕ ವರದಿಯನ್ನು ನೀಡಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿದ್ದು, ಸಾಕಷ್ಟು ಸ್ಫೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ.
 
ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಮಾಧ್ಯಮ ಸಂದರ್ಶನದಲ್ಲಿ ಆರೋಪಿಸಿರುವುದು ಎಲ್ಲವು ಸತ್ಯ.  ಸ್ಥಳೀಯ ಪೊಲೀಸ್ ಅಧಿಕಾರಿಯಾಗಿರುವ ಸಿಪಿಐ ಮಾದಪ್ಪ ಆತ್ಮಹತ್ಯೆ ಪ್ರಕರಣವನ್ನು ತಿರುಚಲು ಯತ್ನಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
 
ಜುಲೈ 5 ರ ಸಂಜೆ 7 ಗಂಟೆಗೆ ಗಣಪತಿ ಅವರು ಆತ್ಮಹತ್ಯೆಗೆ ಶರಣಾಗಿರುವ ಕುರಿತು ಸ್ಥಳೀಯ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆದರೆ, ಪೊಲೀಸರು ಗಣಪತಿ ಪತ್ನಿ ಪಾವನಾ ಅವರಿಗೆ ಮಾಹಿತಿ ನೀಡಿರಲಿಲ್ಲ. ಜೊತೆಗೆ ರಾತ್ರಿ 8 ಗಂಟೆಯವರೆಗೂ ಕೇಸ್ ದಾಖಲಿಸಿಕೊಳ್ಳದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
 
ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುಂಚೆ ಅವರ ಸಹೋದರ ಡಿವೈಎಸ್‌ಪಿ ತಮ್ಮಯ್ಯ ಅವರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಸಂದೇಶ ರವಾನಿಸಿದ್ದರು. ಆದರೆ, ತಮ್ಮಯ್ಯ ತಡವಾಗಿ ಸಂದೇಶವನ್ನು ನೋಡಿರುತ್ತಾರೆ. ಅಷ್ಟೋತ್ತಿಗೆ ಮಾಧ್ಯಮದಲ್ಲಿ ಗಣಪತಿ ನೀಡಿರುವ ಸಂದರ್ಶನ ಪ್ರಸಾರವಾಗುತ್ತಿತ್ತು. ನಂತರ ತಮ್ಮಯ್ಯನವರು ಟವರ್ ಲೋಕೆಶನ್ ಪತ್ತೆ ಮಾಡಲು ಪೊಲೀಸರಿಗೆ ಸೂಚನೆ ನೀಡುತ್ತಾರೆ. ಆವಾಗ, ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಸಿಐಡಿ ಅಧಿಕಾರಿಗಳು ವರದಿ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಿಚಿತ್ರ ಆದ್ರೂ ಸತ್ಯ: 50 ವರ್ಷದೊಳಗಿನ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಪಾಠ ಮಾಡುವಂತಿಲ್ಲ