ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

Sampriya
ಶುಕ್ರವಾರ, 18 ಜುಲೈ 2025 (19:02 IST)
Photo Credit X
ರಾಯಚೂರು: ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಅವ್ಯವಸ್ಥೆಯ ಗೂಡಾಗಿದ್ದು, ಇದೀಗ ಸಭೆ ನಡೆಯುತ್ತಿರುವಾಗಲೇ ಅರಣ್ಯ ಸಂರಕ್ಷಣಾಧಿಕಾರಿ ಮೊಬೈಲ್‌ನಲ್ಲಿ ರಮ್ಮಿ ಆಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಸಂಬಂಧದ ವಿಡಿಯೋ ವೈರಲ್ ಆಗಿದೆ. 

ಸಭೆಯ ಗೌರವನ್ನು ಕಾಯ್ದುಕೊಳ್ಳುವಂತೆ ಜಿಲ್ಲೆಯ ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರನ್ನು ತರಾಟೆ ತೆಗೆದುಕೊಳ್ಳುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. 

ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ್ ಅವರು ಸಭಾಂಗಣದಲ್ಲೇ ಕುಳಿತು ಬಹಳ ಹೊತ್ತಿನವರೆಗೂ ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದರು. ಇದನ್ನು ಗಮನಿಸಿದ ಒಬ್ಬರು ದೃಶ್ಯವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. 

ನೀವು ಗಂಭೀರವಾಗಿಲ್ಲ, ಅಧಿಕಾರಿಗಳು ಗಂಭೀರವಾಗಿಲ್ಲ. ಕನಿಷ್ಠ ಪಕ್ಷ ಶಾಸಕರ ಗೌರವವನ್ನಾದರೂ ಉಳಿಸಿ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿರುವಾಗಲೇ ವಿಡಿಯೊ ತೆಗೆಯಲಾಗಿದೆ.  ಈ ಸಂದರ್ಭದಲ್ಲಿ ಒಂದೊಂದು ಅಧಿಕಾರಿಗಳು ಮೂಗಲ್ಲಿ ತೋರು ಬೆರಳು, ಇನ್ನೊಬ್ಬರು ಕಿವಿಯಲ್ಲಿ ಪೆನ್ನು ಹಾಕಿ ತಿರುವಿಕೊಳ್ಳುತ್ತಿದ್ದರು. 

ಅದಲ್ಲದೆ ಪತ್ರಕರ್ತರ ಆಸನದಲ್ಲೂ ಬೇರೆಯವರು ಕೂತು, ಜಾಗ ಇಲ್ಲದ ಕಾರಣ ಪತ್ರಕರ್ತರು ಶಾಸಕರ ಜಾಗದಲ್ಲಿ ಕುಳಿತುಕೊಂಡಿದ್ದರು. ಒಟ್ಟಾರೆ ಸಭೆ ಅವ್ಯವಸ್ಥೆಯ ಗೂಡಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments