Publish Date: Tue, 21 Jul 2026 (17:32 IST)
Updated Date: Tue, 21 Jul 2026 (17:35 IST)
ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿ ಮಾಡಿ, ಆಗಸ್ಟ್ 1ರಂದು ಖುದ್ದಾಗಿ ಕೋರ್ಟ್‌ಗೆ ಹಾಜರಾಗುವಂತೆ ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್‌ಗೆ ಸೂಚಿಸಿದೆ.
ಏನಿದು ಪ್ರಕರಣ:
ಆರ್‌ಎಸ್ಎಸ್ ಕಾರ್ಯಕರ್ತ, ಬೆಂಗಳೂರಿನ ಸಿದ್ದಾಪುರದ ತೇಜಸ್ ಗೌಡ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. 2025ರ ಅಕ್ಬೋಬರ್ 14 ರಂದು ಪ್ರಿಯಾಂಕ್ ಖರ್ಗೆ ತಮ್ಮ ಟ್ವೀಟ್‌ನಲ್ಲಿ ಆರ್‌ಎಸ್‌ಎಸ್ ವಿರುದ್ದ ಪೋಸ್ಟ್ ಹಾಕಿದ್ದರು. ಅತ್ತ ಮೊಹಮ್ಮದ್ ನಲಪಾಡ್ ಯೂಟ್ಯೂಬ್ ಚಾನಲ್ ಒಂದರಲ್ಲಿ ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಸಂಬಂಧ ದೂರು ನೀಡಲಾಗಿತ್ತು. ಈ ಇಬ್ಬರ ಹೇಳಿಕೆಯಿಂದ ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಈ ಹಿಂದೆಯೂ ಕೋರ್ಟ್ ಇಬ್ಬರಿಗೂ ಸಮನ್ಸ್ ಜಾರಿ ಮಾಡಿತ್ತು. ಇದೀಗ ಸಮನ್ಸ್ ಜಾರಿ ಬಗ್ಗೆ ಪೊಲೀಸರ ಮಾಹಿತಿ ಒಪ್ಪದ ಕೋರ್ಟ್, ಮತ್ತೊಮ್ಮೆ ಪ್ರಿಯಾಂಕ್ ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್‌ಗೆ ಸಮನ್ಸ್ ಜಾರಿ ಮಾಡಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ