Select Your Language

Notifications

webdunia
webdunia
webdunia
webdunia

ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್‌: ಎಫ್‌ಐಆರ್‌

ಮುಖ್ಯಮಂತ್ರಿ ಸಿದ್ದರಾಮಯ್ಯ

Sampriya

ಬೆಂಗಳೂರು , ಶನಿವಾರ, 6 ಸೆಪ್ಟಂಬರ್ 2025 (15:44 IST)
Photo Credit X
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದಗಳಿಂದ ಹೀಯಾಳಿಸಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿಯಲ್ಲಿ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಕುರಿತು ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ವಿಭಾಗದ ಗಮನಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 3 ರಂದು ಸೈಬರ್ ಅಪರಾಧ ಪೊಲೀಸರು ಪ್ರಕರಣದಡಿಯಲ್ಲಿ ದಾಖಲಿಸಿದ್ದಾರೆ. 

ಈ ಸಂಬಂಧ ಪ್ರತಿಕ್ರಿಯಿಸಿದ ಪೊಲೀಸ್ ಉಪ ಆಯುಕ್ತ (ಅಪರಾಧ -2) ರಾಜಾ ಇಮಾಮ್ ಖಾಸಿಂ ಅವರು, ಸಿಎಂ ವಿರುದ್ಧ ಅವಹೇಳನಕಾರಿ ಪದಗಳಿಂದ ಹೀಯಾಳಿಸಿದ ಸಂಬಂಧ ಪ್ರಕರಣ ದಾಖಲಿಸಲಾಗಿದೆ. 

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್‌ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತವನ್ನು ಕೋರುತ್ತಾ, ’ಮೇಡಂ ಯು ನೊ ಕನ್ನಡ’ ಎಂದು ಪ್ರಶ್ನೆ ಮಾಡಿದ್ದರು. 

ಈ ವಿಚಾರವಾಗಿ ಸಿಎಂ ಅವರನ್ನು ಟ್ರೋಲ್ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ಬಾ ನಲ್ಲ ಮದುಚಂದ್ರಕ್ಕೆ ಪ್ರಕರಣ: ರಾಜಾ ರಘುವಂಶಿ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ