ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.
ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ದೂರನ್ನು ದಾಖಲಿಸಿದ್ದಾರೆ. ಅದರ ಅನ್ವಯ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ ರವಿಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗುವುದು ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿರುವ ಎನ್ ರವಿಕುಮಾರ್ ಅವರು, "ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ" ಎಂದಿದ್ದರು.
ಈ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ವಿವಾದಕ್ಕೆ ಕಾರಣವಾಯಿತು.