Webdunia - Bharat's app for daily news and videos

Install App

ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ವಿಚಾರಣೆಗೆ ಹೈಕೋರ್ಟ್ ತಡೆ

Sampriya
ಬುಧವಾರ, 10 ಜುಲೈ 2024 (19:09 IST)
Photo Courtesy X
ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಸಂಬಂಧ ಆರ್‌ಸ್ಸೆಸ್ಸೆ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ  ಶ್ರೀರಂಗಪಟ್ಟಣ ಜೆಎಂಎಫ್ ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಪ್ರಭಾಕರ್ ಭಟ್ ಅವರು ತನ್ನ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ಪ್ರಭಾಕರ ಭಟ್ ಪರ ಹೈಕೋರ್ಟ್ ಹಿರಿಯ ವಕೀಲ ಎಂ‌.ಅರುಣ್ ಶ್ಯಾಮ್ ವಾದ ಮಂಡಿಸಿದರು.

ಪ್ರಕರಣದ ಹಿನ್ನೆಲೆ:  2023ರ ಡಿಸೆಂಬರ್ 24ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಂದು ಗಂಡ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಸಾರ್ವಜನಿಕ ವೇದಿಕೆಯಲ್ಲಿ ಹೇಳಿದ್ದರು.

ಮಹಿಳೆಯರ ಬಗ್ಗೆ ಅಸಹ್ಯವಾಗಿ ಮಾತನಾಡಿ ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ (27) ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 26ರಂದು ದೂರು ನೀಡಿದ್ದರು.

ದೂರಿನ ಅನ್ವಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್ ಸಿ ವಿಚಾರಣಾ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments