Select Your Language

Notifications

webdunia
webdunia
webdunia
webdunia

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್

Sampriya

ಬೆಂಗಳೂರು , ಶುಕ್ರವಾರ, 4 ಜುಲೈ 2025 (17:49 IST)
Photo Credit X
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಅವರಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ.

ಜೂನ್‌ 8ರ ವರೆಗೆ ಬಂಧಿಸಂದತೆ ಆದೇಶ ನೀಡಿರುವ ಕೋರ್ಟ್‌ ತನಿಖೆಗೆ ಸಹಕರಿಸುವಂತೆ ರವಿಕುಮಾರ್‌ಗೆ ಅವರಿಗೆ ಸೂಚನೆ ನೀಡಿದೆ.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್‌. ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಜೆ.ಪಿ.ನಗರದ ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 351(3), 75(3), 79 ಅಡಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇದೀಗ ಈ ಪ್ರಕರಣ ಸಂಬಂಧ ರವಿ ಕುಮಾರ್‌ಗೆ ಬಿಗ್‌ ರಿಲೀಫ್ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್