Publish Date: Sun, 05 Feb 2023 (13:09 IST)
Updated Date: Sun, 05 Feb 2023 (13:19 IST)
ಕೋಲಾರ : ನಾನು ಕೋಲಾರದಲ್ಲಿ ಸ್ಪರ್ಧಿಸಿದರೂ 200% ಗೆಲ್ತೀನಿ. ಆದರೆ ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕು ಅನ್ನೋದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಡಿಯೂರಪ್ಪರನ್ನೇ ಪಂಚರ್ ಮಾಡಿದ್ದಾರೆ. ಅದಕ್ಕಾಗಿ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಬಿಎಸ್ವೈ ಬಗ್ಗೆ ನನಗೆ ಅಪಾರವಾದ ಗೌರವವಿದೆ, ಅನುಕಂಪವಿದೆ ಎಂದು ಹೇಳಿದರು.
ಕಾಂಗ್ರೆಸ್ನಲ್ಲಿ ಹಲವರು ಸಿಎಂ ಸ್ಥಾನದ ತಿರುಕನ ಕನಸು ಕಾಣುತ್ತಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಯಾರು ಸಹ ಕನಸು ಕಾಣುತ್ತಿಲ್ಲ.
ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ವಾಸ್ತವ ಸತ್ಯಾಂಶ ಹೇಳಿದ್ದೇನೆ. ಕಾಂಗ್ರೆಸ್ ನೂರಕ್ಕೆ ನೂರರಷ್ಟು ಈ ಬಾರಿ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.