Publish Date: Sun, 27 Sep 2026 (16:31 IST)
Updated Date: Sun, 27 Sep 2026 (16:34 IST)
ಬೆಂಗಳೂರು: ಎಲ್ಲ ಮಠಗಳಿಗೂ ಜಾತಿ ಬೇಕು. ಬೇಡವೆಂದೂ ಹೇಳಿದರೂ ಅನಿವಾರ್ಯವಾಗುತ್ತದೆ. ವೀರಶೈವ ಲಿಂಗಾಯತ ಸಮಾಜವಷ್ಟೇ ಒಗ್ಗೂಡಿದರೆ ಸಾಲದು. ಎಲ್ಲ ಸಮಾಜಗಳನ್ನೂ ಒಗ್ಗೂಡಿಸಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯು ಭಾನುವಾರ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಏರ್ಪಡಿಸಿದ್ದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನದಲ್ಲಿ ಮಾತನಾಡಿದರು.
ಎಲ್ಲ ಮಠಗಳಿಗೂ ಜಾತಿ ಬೇಕು. ಬೇಡವೆಂದರೂ ಅನಿವಾರ್ಯವಾಗುತ್ತದೆ. ಆದರೆ ಮಾನವ ಧರ್ಮದ ಪ್ರತಿಪಾದನೆಯಿಂದ ಮಾತ್ರ ಮಠಗಳಿಗೆ ಶಕ್ತಿ ಬರುತ್ತದೆ. ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ತತ್ವವನ್ನು ಯಾವತ್ತೂ ಬಿಡಬಾರದು. ಅನುಸರಣೆಯಿಂದ ಮುಂದುವರಿಯಬೇಕು ಎಂದು ಪ್ರತಿಪಾದಿಸಿದರು.
ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಕೊಟ್ಟ ಬಸವಣ್ಣನವರ ಭಾವಚಿತ್ರವನ್ನು ರಾಜ್ಯ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದೆ. ಎಲ್ಲ ಸಮುದಾಯದ ಮಠಗಳು ಎಲ್ಲ ಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡಿವೆ. ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲ ಮಠಗಳೂ ಕೊಡುಗೆ ನೀಡುತ್ತಿವೆ ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ