ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಳಿ ಮುಂದುವರಿದಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದೆ. ಸಕಲೇಶಪುರ ತಾಲ್ಲೂಕಿನ ಬೈಕೆರೆ, ಸುಲಗಳಲೆ, ನಾರ್ವೆಪೇಟೆ ಗ್ರಾಮಗಳಲ್ಲಿನಡೆದಿದ್ದು, ಗ್ರಾಮದ ಬಳಿಯೇ ಬೀಡುಬಿಟ್ಟಿರುವ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಭತ್ತ, ಕಾಫಿ, ಬಾಳೆ, ಅಡಿಕೆ ಗಿಡಗಳನ್ನು ತುಳಿದು ನಾಶ ಮಾಡಿವೆ. ಗಿಡ್ಡಪ್ಪ, ಚಂದ್ರೇಗೌಡ, ಮಲ್ಲೇಶ್ ಹಾಗೂ ಹಲವು ರೈತರು ಬೆಳೆದಿದ್ದ ಬೆಳೆ ನಾಶವಾಗಿದೆ.