Publish Date: Sun, 30 Sep 2018 (19:52 IST)
Updated Date: Sun, 30 Sep 2018 (19:54 IST)
ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ಯವಕನನ್ನು ವಿಚಾರಣೆಗೆ ಒಳಪಡಿಸಿದಾಗ ಕಳೆದ ಮೂರು ವರ್ಷಗಳಲ್ಲಿ 40 ಬೈಕ್ ಗಳನ್ನು ಕಳ್ಳತನ ಮಾಡಿದ್ದು ಒಪ್ಪಿಕೊಂಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.
ಕಳ್ಳತನ ಮಾಡಲಾಗಿದ್ದ ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೀದರ್ ಜಿಲ್ಲಾ ಎಸ್ಪಿ ಅರುಣ್ ರಂಗರಾಜನ್ ತಿಳಿಸಿದ್ದಾರೆ.
ಗಾಂಧಿ ನಗರ ಪೋಲೀಸಠಾಣೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಎಸ್ ಪಿ, ಮೋಟಾರ್ ಸೈಕಲ್ ಕಳ್ಳ, ಬಂಧಿತ ಆರೋಪಿ ರಾಮಾಂಜಿನಿ ಆಲಿಯಾಸ್ ಗುಂಟೆಪ್ಪ(26). ಬಂಧಿತನಿಂದ 40 ಬೈಕ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಕಳ್ಳತನ ಮಾಡಿ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿ ಅನುಮಾನ ಬಾರದಂತೆ ವಾಹನಗಳ ಮಾರಾಟ ಮಾಡುತ್ತಿದ್ದ ಎಂದು ಹೇಳಿದರು. ಎಲ್ಲಾ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದರು. ನಗರ ಡಿಎಸ್ಪಿ ಉಮೇಶ್ ಈಶ್ವರ್ ನಾಯಕ್, ಪಿಐ ಆರ್.ನಾಗರಾಜ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿ ಪತ್ತೆಯಾಗಿದ್ದಾನೆ.