Select Your Language

Notifications

webdunia
webdunia
webdunia
webdunia

ಪುರಾವೆ ಆಧರಿಸಿ ಆರೋಪಿಗಳ ಬಂಧನ

ಪುರಾವೆ ಆಧರಿಸಿ ಆರೋಪಿಗಳ ಬಂಧನ
bangalore , ಬುಧವಾರ, 20 ಏಪ್ರಿಲ್ 2022 (18:36 IST)
ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಮಾಯಕರನ್ನು ಬಂಧಿಸಲಾಗಿಲ್ಲ, ಲಭ್ಯವಿರುವ ಪುರಾವೆಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣ ಸಂಬಂಧ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿನ ನಂತರ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ ಮತ್ತು ಬೆಂಗಳೂರಿನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕ್ರಮ ಕೈಗೊಳ್ಳುವಲ್ಲಿ ಸರ್ಕಾರದ ಕಡೆಯಿಂದ ಯಾವುದೇ ವಿಳಂಬವಾಗಿಲ್ಲ.  ಪೊಲೀಸರು ತನಿಖೆ ಕೈಗೊಂಡು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹುಬ್ಬಳ್ಳಿಯಲ್ಲಿ ಏ.23ರ ವರೆಗೆ ನಿಷೇಧಾಜ್ಞೆ