Publish Date: Sat, 26 Oct 2019 (19:46 IST)
Updated Date: Sat, 26 Oct 2019 (19:47 IST)
ಉಗ್ರಗಾಮಿ ಚಟುವಟಿಕೆಗಳು ಹಾಗೂ ಕಾನೂನು ಬಾಹಿರವಾದ ಕೃತ್ಯಗಳ ಹಿನ್ನೆಲೆಯಲ್ಲಿ ವಿದೇಶಿ ಪ್ರಜೆಗಳ ಮೇಲೆ ನಿಗಾ ವಹಿಸಲಾಗಿದೆ.
ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು ವೀಸಾ ಇಲ್ಲದೇ ಅಕ್ರಮವಾಗಿ ನೆಲೆಸಿರೋ 22 ಮಹಿಳೆಯರೂ ಸೇರಿದಂತೆ 60 ಜನರನ್ನು ಬಂಧನ ಮಾಡಿದ್ದಾರೆ.
ಬಾಂಗ್ಲಾ ಪ್ರಜೆಗಳ ವಿರುದ್ಧ ವಿದೇಶಿ ಕಾಯ್ದೆಯಡಿ ಕೇಸ್ ದಾಖಲು ಮಾಡಿ ಅವರ ಪಾಸಪೋರ್ಟ್ ಪರಿಶೀಲನೆ ಮಾಡಲಾಗುತ್ತಿದೆ.
ಸ್ಥಳೀಯವಾಗಿ ಕೆಲಸ ಮಾಡಿಕೊಂಡು ಸರಕಾರದ ಸೌಲಭ್ಯಗಳನ್ನು ಬಳಸಿಕೊಂಡಿರೋದು ತನಿಖೆಯಿಂದ ಬೆಳಕಿಗೆ ಬಂದಿದೆ.
ಬಂಧಿತರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.