Webdunia - Bharat's app for daily news and videos

Install App

ಗಾಂಜಾ ಮಾರಾಟ ಮಾಡುತ್ತಿದ್ದ ನೈಜಿರಿಯಾ ಪ್ರಜೆಗಳ ಬಂಧನ

Webdunia
ಮಂಗಳವಾರ, 28 ಸೆಪ್ಟಂಬರ್ 2021 (19:42 IST)
ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ನೈಜಿರಿಯಾ ಪ್ರಜೆಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಚಿನೋನಿ (32) ಮತ್ತು ಕ್ಲೆವಿಯನ್ (30) ಬಂಧಿತ ನೈಜಿರಿಯಾ ಪ್ರಜೆಗಳು. ಅವರಿಂದ 10 ಲಕ್ಷ ರೂ. ಮೌಲ್ಯದ 31 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಕೆಲ ವರ್ಷಗಳ ಹಿಂದೆಯೆ ಬೇರೆ ಬೇರೆ ವೀಸಾ, ಪಾಸ್ ಪೋರ್ಟ್ ಪಡೆದು ಬೆಂಗಳೂರಿಗೆ ಬಂದಿದ್ದು, ಹೆಣ್ಣೂರಿನಲ್ಲಿ ವಾಸವಾಗಿದ್ದರು. ಜತೆಗೆ, ಅಕ್ರಮ ಹಣ ಸಂಪಾದಿಸಲು ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದಾರೆ. ಇತ್ತೀಚೆಗೆ ಹೆಣ್ಣೂರು ಠಾಣಾ ವ್ಯಾಪ್ತಿಯ ಸಿಎಂಆರ್ ಲೇಔಟ್​ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. 
ಆರೋಪಿಗಳ ಬಳಿ ಯಾವುದೇ ವೀಸಾ, ಪಾಸ್ ಪೋರ್ಟ್ ಪತ್ತೆಯಾಗಿಲ್ಲ. ಅಲ್ಲದೆ ವಿಚಾರಣೆಗೂ ಸಹಕರಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ವಿದೇಶಿ ಕಾಯ್ದೆ ಮತ್ತು ಎನ್ ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಜತೆಗೆ, ವೀಸಾ, ಪಾಸ್ ಪೋರ್ಟ್ ಪರಿಶೀಲಿಸದೆ ಮನೆ ಬಾಡಿಗೆ ನೀಡಿದ ಆರೋಪದಡಿ ಮನೆ ಮಾಲೀಕರ ವಿರುದ್ದವೂ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ