Publish Date: Mon, 10 Dec 2018 (18:38 IST)
Updated Date: Mon, 10 Dec 2018 (18:40 IST)
ಮನೆ ಕಳ್ಳತನ ಮಾಡುವುದರಲ್ಲಿ ಕುಖ್ಯಾತರಾಗಿದ್ದ ತ್ರಿಮೂರ್ತಿಗಳ ಹೆಡೆಮುರಿ ಕಟ್ಟುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಬುರ್ಗಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕುಖ್ಯಾತ ಅಂತರಾಜ್ಯ ಮನೆ ಕಳ್ಳರನ್ನು ಬಂಧನ ಮಾಡಿದ್ದಾರೆ.
ಬಂಧಿತರಿಂದ 500 ಗ್ರಾಮ್ ಚಿನ್ನ ವಶಕ್ಕೆ ಪಡೆಯಲಾಗಿದೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸರದಾರ, ಶಿಕಾರಿ ಚವ್ಹಾಣ ಮತ್ತು ಶಿಕಾರಿ ಸಂಧು ಬಂಧಿತ ಆರೋಪಿಗಳಾಗಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗುಂತಕಲ್ ಭಾಗದಲ್ಲಿ ಹೆಚ್ಚು ಕಳ್ಳತನ ಮಾಡಿದ್ದ ಆರೋಪಿಗಳ ವಿರುದ್ಧ ಕಲಬುರ್ಗಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ.