Publish Date: Thu, 22 Nov 2018 (20:18 IST)
Updated Date: Thu, 22 Nov 2018 (20:20 IST)
ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿ ನಡೆದಿದ್ದ ಸರಗಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರಿನ ಆಲನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ, ಇಬ್ಬರು ಸರಗಳ್ಳರ ಬಂಧನ ಮಾಡಿದ್ದಾರೆ. ಮಹಮದ್ ಸಾದ್ (21) ಮಹಮದ್ ಮೊಯಿಬ್ (23) ಬಂಧಿತ ಆರೋಪಿಗಳಾಗಿದ್ದಾರೆ. ಇಬ್ಬರು ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿಗಳಾಗಿದ್ದಾರೆ.
ಬಂಧಿತರಿಂದ ಮೈಸೂರು ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 8 ಸರಗಳವು ಪ್ರಕರಣ ದಾಖಲಾಗಿರುವುದು ಬಯಲಿಗೆ ಬಂದಿದೆ.
ಬಂಧಿತರಿಂದ 11 ಲಕ್ಷ ಮೌಲ್ಯದ 340 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ 2 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.