ಗಮನ ಬೇರೆ ಕಡೆ ಸೆಳೆದು ಕಳ್ಳತನ: ಕುಖ್ಯಾತ ಕಳ್ಳರ ಬಂಧನ

Webdunia
ಬುಧವಾರ, 11 ಜುಲೈ 2018 (13:52 IST)
ಗಮನ ಬೇರೆ ಕಡೆಗೆ ಸೆಳೆದು ಕಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರಾಜ್ಯ ಕಳ್ಳರ ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ, ಸತ್ಯಮೂರ್ತಿ ಜ್ಞಾನವೇಲು, ಕುಮಾರೇಶನ್ ಸೇಲ್ವರಾಜ್, ಕೆ ಬಾರದಿರಾಜ್ ಕೇಶವನ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ 1 ಲಕ್ಷ 50 ಸಾವಿರ ಮೌಲ್ಯದ ಒಂದು ಲ್ಯಾಪ್ಟಾಪ್ 1 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ತಮಿಳುನಾಡು, ಮಹಾರಾಷ್ಟ್ರ, ಸೇರಿದಂತೆ ದೇಶದ ನಾನಾ ಕಡೆಗಳಲ್ಲಿ ಕಳ್ಳತನ ಮಾಡುತ್ತಿದ್ದರು.‌ ಜೂ. 3 ರಂದು ಕೊಪ್ಪಿಕರ್ ರಸ್ತೆಯ ಸೆಟಲೈಟ್ ಬಿಲ್ಡಿಂಗ್ ಎದುರಿನ‌ ಕಾರು ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಸಾಜೀದ್ ಫರಾಶ್ ಎನ್ನುವರ ಕಾರಿನಲ್ಲಿನ 45 ಸಾವಿರ ಮೌಲ್ಯದ ಆಪಲ್ ಕಂಪನಿಯ ಲ್ಯಾಪಟಾಪ್ ಹಾಗೂ ಕಾಗದ ಪತ್ರಗಳನ್ನು ಕಳ್ಳತನ ಮಾಡಿದ್ದರು. ಈ ಸಂಬಂಧ ಶಹರ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿತ್ತು. ಆರೋಪಿಗಳ ಹಿಂದೆ ಬಿದಿದ್ದ ಪೊಲೀಸರು.

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಓಡಿ ಹೋಗುವಾಗ ಕಳ್ಳನನ್ನು ಬೆನ್ನಹತ್ತಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಹರ ಪೊಲೀಸ ಇನ್ಸ್‌ಪೆಕ್ಟರ್ ಭರತ ಎಸ್ .ಆರ್. ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸ ಸಿಬ್ಬಂದಿಗಳಾದ ಸದಾನಂದ ಕಲಘಟಗಿ, ಮಂಜು ಹಾಲವರ, ಶ್ರೀನಿವಾಸ ಯರಗುಪ್ಪಿ, ಚಂದ್ರಶೇಖರ್ ಆರೋಪಿಗಳ ಬಂಧನ‌ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments