Select Your Language

Notifications

webdunia
webdunia
webdunia
webdunia

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‍ಗಳ ಬಂಧನ

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‍ಗಳ  ಬಂಧನ
bangalore , ಸೋಮವಾರ, 21 ಫೆಬ್ರವರಿ 2022 (20:55 IST)
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಅಂತಾರಾಜ್ಯ ಡ್ರಗ್ಸ್ ಪೆಡ್ಲರ್‍ಗಳನ್ನು ಶ್ರೀರಾಮಪುರ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ತ್ರಿಪುರಾ ಮೂಲದ ಜಾವೇದ್ ಹುಸೇನ್(23), ಮೌಸಿನ್ ಮಿಯಾ(23) ಹಾಗೂ ಅಬ್ದುಲ್ ಅಲಂಗಿರ್(22) ಬಂಧಿತರು. ಆರೋಪಿಗಳಿಂದ 15 ಕೆ.ಜಿ.ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ. 
ಫೆ.19ರಂದು ಬೆಳಗ್ಗೆ 10.30ರ ಸುಮಾರಿಗೆ ಮೂವರು ಅಪರಿಚಿತರು ದ್ವಿಚಕ್ರವಾಹನದಲ್ಲಿ ಗಾಂಜಾ ಇರಿಸಿಕೊಂಡು ಮಾರಾಟಕ್ಕೆ ತೆರಳುತ್ತಿರುವ ಬಗ್ಗೆ ಸ್ಥಳೀಯರು ಪೆÇಲೀಸರಿಗೆ ಮಾಹಿತಿ ನೀಡಿದ್ದರು. ದೊರೆತ ಖಚಿತ ಮಾಹಿತಿ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೆÇಲೀಸರು, ಮಾಲುಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಮೂವರು ಆರೋಪಿಗಳು ನಗರದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಸುಲಭವಾಗಿ ಹೆಚ್ಚಿನ ಹಣ ಸಂಪಾದಿಸುವ ಉದ್ದೇಶದಿಂದ ಡ್ರಗ್ಸ್ ಪೆಡ್ಲಿಂಗ್ ದಂಧೆಗೆ ಇಳಿದಿದ್ದರು. ತವರು ರಾಜ್ಯ ತ್ರಿಪುರಾಕ್ಕೆ ಹೋದಾಗ ಕಡಿಮೆ ದರಕ್ಕೆ ಗಾಂಜಾ ಖರೀದಿಸಿ ಬಳಿಕ ಅದನ್ನು ನಗರಕ್ಕೆ ತಂದು ಗಿರಾಕಿಗಳನ್ನು ಹುಡುಕಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಯಾರಿಗೂ ಅನುಮಾಬಾರದ ಹಾಗೆ ಲಗೇಜ್ ಬ್ಯಾಗ್‍ನಲ್ಲಿ ಗಾಂಜಾ ಇರಿಸಿ ರೈಲಿನ ಮೂಲಕ ನಗರಕ್ಕೆ ತರುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಎದುರು ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕಳವು