Daily Horoscope

Select Your Language

Notifications

webdunia
webdunia
webdunia
webdunia

ತಲೆಕೆಟ್ಟಿರುವ ದೇವರಾಜೇಗೌಡರನ್ನು ಆಸ್ಪತ್ರೆಗೆ ಸೇರಿಸಬೇಕು: ಡಿಕೆಶಿ ಆಕ್ರೋಶ

DKC
ಬೆಂಗಳೂರು:  ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಪ್ರಕರಣ ಸಾಕ್ಷಿಯಾಗಿದ್ದ ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಅವರು ಬೇರೊಂದು ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ಅವರು ಇದರ ಹಿಂದೆ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದರು.

ಈ ಆರೋಪದ ಬಗ್ಗೆ ಇಂದು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೇವರಾಜೇಗೌಡ ತಲೆಕೆಟ್ಟವನು ಅವನನ್ನು ಮೊದಲು ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು..

ನಾನು ದೇವರಾಜೇಗೌಡ ಜತೆ ಯಾವುದೇ ಮಾತುಕತೆ ನಡೆಸಿಲ್ಲ. ತಪ್ಪು ಮಾಡದ ನಾನು ಇದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಪಕ್ಷದ ಸಲುವಾಗಿ ನನ್ನನ್ನು ಸಾವಿರಾರು ಜನ ಭೇಟಿಯಾಗ ಮಾತುಕತೆ ನಡೆಸುತ್ತಾರೆ. ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೋ ಯಾರಿಗೆ ಗೊತ್ತು ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಎವರೆಸ್ಟ್ ಚಿಕನ್ ಮಸಾಲಾ ಬಳಸಬೇಡಿ, ಮನೆಯಲ್ಲಿದ್ದರೆ ವಾಪಾಸ್ ನೀಡಿ: ಆಹಾರ ಸುರಕ್ಷತಾ ಅಧಿಕಾರಿ