ಡಿಕೆ ಶಿವಕುಮಾರ್ ವಿರುದ್ಧ ಆರೋಪ ಹೊರಿಸಿದ್ದ ದೇವರಾಜೇಗೌಡಗೆ ಹಳೇ ಕೇಸ್ ಜಡಿದು ಅರೆಸ್ಟ್

Krishnaveni K
ಶನಿವಾರ, 11 ಮೇ 2024 (12:07 IST)
Photo Courtesy X
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸೋರಿಕೆ ಮಾಡಿದ್ದಾರೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಅವರನ್ನು ಈಗ ಹಳೇ ಕೇಸ್ ನಲ್ಲಿ ಬಂಧಿಸಲಾಗಿದೆ.
 
ನಿನ್ನೆ ರಾತ್ರಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ದೇವರಾಜೇಗೌಡರನ್ನು ಬಂಧಿಸಲಾಗಿದೆ. ದೇವರಾಜೇಗೌಡ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಏಪ್ರಿಲ್ 1 ರಂದು ಪ್ರಕರಣ ದಾಖಲಾಗಿತ್ತು. ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟು ತಡವಾಗಿ ಕ್ರಮ ಕೈಗೊಳ್ಳಲಾಗಿದೆ.

ಸೈಟು ಮಾರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಗೆ ಸಹಾಯ ಮಾಡುವುದಾಗಿ ನಂಬಿಸಿ ಕಾರಿನಲ್ಲಿ ಸುತ್ತಾಡಿಸಿ  ಮೈಕೈ ಮುಟ್ಟಿ ಲೈಂಗಿಕವಾಗಿ ದೌರ್ಜನ್ಯವೆಸಗಿದ್ದಾರೆ ಎಂದು ದೇವರಾಜೇಗೌಡ ವಿರುದ್ಧ ದೂರು ದಾಖಲಾಗಿತ್ತು. ಆ ಪ್ರಕರಣದ ಬಗ್ಗೆ ಇಷ್ಟು ತಡವಾಗಿ ಕ್ರಮ ಕೈಗೊಂಡಿರುವುದು ಪ್ರಶ್ನೆ ಹುಟ್ಟುಹಾಕಿದೆ.

ಇದೀಗ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡ ಪದೇ ಪದೇ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಹೊರಿಸುತ್ತಲೇ ಇದ್ದರು. ಇದರ ಬೆನ್ನಲ್ಲೇ ದೇವರಾಜೇಗೌಡರನ್ನು ಬಂಧಿಸಿದ್ದು ಎಲ್ಲರೂ ಹುಬ್ಬೇರುವಂತೆ ಮಾಡಿದೆ.

ದೇವರಾಜೇಗೌಡ ವಿರುದ್ಧ ಬಲವಾದ ಸಾಕ್ಷಿಯಿದ್ದರೂ ಇದುವರೆಗೆ ಬಂಧಿಸಿರಲಿಲ್ಲ. ಆದರೆ ಈಗ ಡಿಕೆಶಿ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ಬಂಧಿಸಿರುವುದು ಎಲ್ಲರ ಪ್ರಶ್ನೆಗೆ ಕಾರಣವಾಗಿದೆ. ತಮ್ಮ ಬಂಧನದ ಸುಳಿವು ಸಿಗುತ್ತಿದ್ದಂತೇ ದೇವರಾಜೇಗೌಡ ತಲೆಮರೆಸಿಕೊಂಡಿದ್ದರು. ಆದರೆ ಈಗ ಪೊಲೀಸರು ಅವರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ