Select Your Language

Notifications

webdunia
webdunia
webdunia
webdunia

ಡಿಕೆಶಿಯನ್ನು ಭೇಟಿ ಮಾಡಿಸುವಂತೆ ದೇವರಾಜೇಗೌಡ ಹಿಂದೆ ಬಿದ್ದಿದ್ದರು: ಶಿವರಾಮೇಗೌಡ

shivarame gowda

Sampriya

ಬೆಂಗಳೂರು , ಬುಧವಾರ, 8 ಮೇ 2024 (19:40 IST)
Photo Courtesy X
ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡಿಸಲು ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ನನ್ನ ದುಂಬಾಲು ಬಿದ್ದೀದ್ದನು. ಆದರೂ ಕೂಡ ನನ್ನ ಹೆಸರು ಹೇಳಿದ್ದು ವಿಷಾದ ಎಂದು ಮಾಜಿ ಸಂಸದ ಶಿವರಾಮೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ಸದ್ಯ ದೇಶದಲ್ಲಿ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣ ದೇಶದಲ್ಲೇ ಚರ್ಚೆಗೆ ಕಾರಣವಾಗಿದ್ದು, ಪೆನ್​​ಡ್ರೈವ್ ಬಿಡುಗಡೆ ಹಿಂದೆ ಮಾಜಿ ಸಂಸದ ಶಿವರಾಮೇಗೌಡರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್​​ಡ್ರೈವ್ ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಸಂಸದ ಶಿವರಾಮೇಗೌಡ ಹೇಳಿದ್ದಾರೆ.

ನಾನು ಕಚೇರಿಯಲ್ಲಿದ್ದಾಗ ಹೊಳೆನರಸಿಪುರದ ಕೆಲವರು ಬಂದಿದ್ದರು. ದೇವರಾಜೇಗೌಡ ನಿಮ್ಮನ್ನು ಭೇಟಿ ಮಾಡಬೇಕು ಅಂತ ನನಗೆ ಹೇಳಿದರು. ಬಳಿಕ ದೇವರಾಜೇಗೌಡಗೆ ಫೋನ್​ ಮಾಡಿಕೊಟ್ಟರು. ಆಗ ನಾನು 'ಏನಪ್ಪ ಚೆನ್ನಾಗಿದ್ದೀಯಾ, ನಿನ್ನ ಆಸೆ ಈಡೇರಿತು. ವರ್ಷಾನುಗಟ್ಟಲೇ ಹೋರಾಟ ಮಾಡುತ್ತಿದ್ದೆ. ಎಲ್ಲವೂ ಆಚೆಗೆ ಬಂತು' ಅಂತ ಫೋನ್​ನಲ್ಲಿ ಇಷ್ಟೇ ಮಾತನಾಡಿದ್ದೇನೆ ಎಂದು ಶಿವರಾಮೇಗೌಡ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ದಕ್ಷಿಣ ಭಾರತದವಳು, ನಾನು ಭಾರತೀಯಳಂತೆ ಕಾಣುತ್ತೇನೆ: ಪಿತ್ರೋಡಾಗೆ ನಟಿ ಪ್ರಣೀತಾ ತಿರುಗೇಟು