ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

Sampriya
ಭಾನುವಾರ, 18 ಮೇ 2025 (12:51 IST)
Photo Courtesy X
ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ ಇದು 92ನೇ ಜನ್ಮದಿನದ ಸಂಭ್ರಮ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯರು ಶುಭಾಶಯ ಕೋರಿದ್ದಾರೆ.

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸಾರ್ವಜನಿಕ ಸೇವೆಗಾಗಿ ದೇವೇಗೌಡರು ಎಲ್ಲೆಡೆ ಗೌರವಾನ್ವಿತರಾಗಿದ್ದಾರೆ. ಹಲವಾರು ವಿಷಯಗಳ ಕುರಿತು ಅವರ ಬುದ್ಧಿವಂತಿಕೆ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ ಎಂದು ಹಾರೈಸುತ್ತೇನೆಂದು ಎಕ್ಸ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.  

ನಾಡಿನ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು ಆದ ಎಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಶುಭ ಕೋರಿದ್ದಾರೆ.

ನನ್ನ ಪೂಜ್ಯ ತಂದೆಯವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಮಣ್ಣಿನಮಗ ಹೆಚ್‌ಡಿ ದೇವೇಗೌಡ ಅವರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು. ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಜನ್ಮಜನ್ಮದ ಸುಕೃತ ಎಂದು ಕೇಂದ್ರ ಸಚಿವೂ ಆಗಿರುವ ಹೆಚ್‌.ಡಿ. ಕುಮಾರಸ್ವಾಮಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.  

ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪದ್ಮನಾಭ ನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದ ಬಗ್ಗೆ ಜಿ ಪರಮೇಶ್ವರ್ ರಿಯ್ಯಾಕ್ಷನ್

ಐದು ವರ್ಷವೂ ನೀವೇ ಮುಖ್ಯಮಂತ್ರಿಯಾ ಎಂದಿದ್ದಕ್ಕೆ ಸಿದ್ದರಾಮಯ್ಯ ಹೀಗೆ ಹೇಳಿದ್ರು

ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ₹5ಲಕ್ಷ: ಗಾಯಗೊಂಡವರಿಗೂ ಪರಿಹಾರ ಘೋಷಣೆ

ಯಕ್ಷಗಾನ ಬಣ್ಣ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನರಾದ ಮಹಿಷಾಸುರ ಪಾತ್ರದಾರಿ

ಮುಂದಿನ ಸುದ್ದಿ
Show comments