Publish Date: Mon, 29 Apr 2024 (15:29 IST)
Updated Date: Mon, 29 Apr 2024 (15:35 IST)
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿಚಾರ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ವೇಳೆ ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಭಾವಚಿತ್ರಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ನಾಯಕರು ದೂರು ನೀಡಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್‌ನವರು ಭಾನುವಾರ ಪ್ರತಿಭಟನೆ ನಡೆಸಿದರು. ಕೂಡಲೇ ಪ್ರಜ್ವಲ್ ರೇವಣ್ಣನವರನ್ನು ಬಂಧಿಸಬೇಕೆಂದು ಆಗ್ರಹಿಸಿದರು.
ಈ ವೇಳೆ ಅಕ್ರೋಶ ಹೊರಹಾಕಿದ ಪ್ರತಿಭಟನಕಾರರು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಭಾವಚಿತ್ರಕ್ಕೆ ಚಪ್ಪಲಿ, ಪೊರಕೆ ಹಾಕಿ ಅಕ್ರೋಶ ಹೊರಹಾಕಿದ್ದರು.
ಪ್ರತಿಭಟನೆ ವೇಳೆ ದೇವೇಗೌಡರಿಗೆ ಹಾಗೂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಗೌರವ ತೋರಲಾಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ನಾಯಕರು ಇದೀಗ ಠಾಣೆ ಮೆಟ್ಟಿಲೇರಿದ್ದಾರೆ. ನಗರದ ಪೊಲೀಸ್ ಆಯುಕ್ತರಿಗೆ ದೂರು ನೀಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.