ಮೈಸೂರು: ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಮತ್ತು ಮಾಜಿ ಸಚಿವ ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಚನ್ನಪಟ್ಟಣ ಉಪ ಚುನಾವಣೆ ಪ್ರಚಾರಕ್ಕೆ ಬರುವಂತೆ ಎಚ್.ಡಿ. ದೇವೇಗೌಡರು ಕರೆದಿಲ್ಲ. ಕರೆದಿದ್ದೆ ಎಂದು ಅವರು ಹೇಳಿದರೆ, ನಾನು ಅಂದೇ ರಾಜಕಾರಣ ಬಿಟ್ಟು ಬಿಡುತ್ತೇನೆ ಎಂದು ಜಿಟಿಟಿ ಸಾವಳೆಸೆದರು.
ಜಿಟಿಡಿ ಅವರನ್ನು ದೇವೇಗೌಡರೆ ಕರೆ ಮಾಡಿ ಕರೆದಿದ್ದರು ಎಂಬ ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿಕೆಗೆ ಮೈಸೂರಿನಲ್ಲಿ ತಿರುಗೇಟು ನೀಡಿದರು.
ಎಚ್.ಡಿ.ದೇವೆಗೌಡರು ನನ್ನನ್ನು ಉಪಚುನಾವಣೆ ಪ್ರಚಾರಕ್ಕೆ ಕರೆದಿದ್ದೇನೆ ಎಂದು ಹೇಳಲಿ. ನಾನು ಅಂದೆ ರಾಜಕಾರಣವನ್ನ ಬಿಟ್ಟುಬಿಡುತ್ತೇನೆ. ಸಾ.ರಾ.ಮಹೇಶ್ ಸುಮ್ಮನೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಸುಳ್ಳು ಹೇಳಿಕೊಂಡು ಚಾಮುಂಡಿಬೆಟ್ಟಕ್ಕೆ ಬಾ ಅಲ್ಲಿಗೆ ಬಾ ಅಂದರೆ ಹೋಗಲು ಆಗುತ್ತದ. ಈ ಹಿಂದೆ ವಿಶ್ವನಾಥ್ ಜೊತೆ ಚಾಮುಂಡಿಬೆಟ್ಟಕ್ಕೆ ಹೋಗಿ ಅವರ ಕಥೆ ಏನಾಯಿತು. ಆ ಕಥೆ ನನಗು ಆಗಬೇಕಾ ಎಂದು ಖಾರವಾಗಿ ಮಾತನಾಡಿದರು.
ನಾನು ಹೇಳುತ್ತಿರೋದೆ ಸತ್ಯ. ನಾನು ತಪ್ಪು ಮಾಡಿದ್ದರೆ ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಳ್ಳುತ್ತೇನೆ. ನಾನು ಯಾವುದಕ್ಕೂ ಹೆದರುವುದಿಲ್ಲ ಸುಳ್ಳು ಹೇಳುವವನು ಅಲ್ಲ. ಸಾರಾ ಮಹೇಶ್ ಸುಮ್ಮನೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದರು.