Webdunia - Bharat's app for daily news and videos

Install App

ಕಾನೂನು ಕ್ರಮ ಎದುರಿಸಲು ಪ್ರಜ್ವಲ್‌ಗೆ ದೇವೇಗೌಡರ ಎಚ್ಚರಿಕೆ, ಇದು ಗೌಡರ ಕುಟುಂಬದ ವಿಚಾರ ಎಂದ ಡಿಕೆಶಿ

sampriya
ಶುಕ್ರವಾರ, 24 ಮೇ 2024 (15:53 IST)
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಹಿಂತಿರುಗಿ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕಾನೂನು ಕ್ರಮ ಎದುರಿಸುವಂತೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಎಚ್ಚರಿಕೆ ನೀಡಿದ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಇದು ಗೌಡದ ಕೌಟುಂಬಿಕ ವಿಚಾರ. ಆ ವಿಚಾರದಲ್ಲಿ ನಾನು ಮಧ್ಯಪ್ರವೇಶಿಸಲು ಬಯಸುವುದಿಲ್ಲ ಎಂದು ಮಾಧ್ಯಮಗಳಿಗೆ ಉಪಮುಖ್ಯಮಂತ್ರಿ ಶಿವಕುಮಾರ್‌ ಹೇಳಿದ್ದಾರೆ. ಪ್ರಜ್ವಲ್‌ ಪೆನ್‌ಡ್ರೈವ್‌ ಬಿಡುಗಡೆಗೆ ಸಂಬಂಧಿಸಿದಂತೆ ಶಿವಕುಮಾರ್‌ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಮಧ್ಯ ಜಟಾಪಟಿ ನಡೆಯುತ್ತಲೇ ಇದೆ.

ಮನೆಕೆಲಸದಾಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದೇವೇಗೌಡ ಅವರ ಮೊಮ್ಮಗ ಆಗಿರುವ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಎಸ್‌ಐಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರು, ತನ್ನ ಮೊಮ್ಮಗ ಎಲ್ಲಿದ್ದಾನೆ ಎಂದು ತಿಳಿದಿಲ್ಲ. ಆದರೆ ಮನೆಗೆ ಹಿಂತಿರುಗಿ ಕಾನೂನು ಎದುರಿಸುವಂತೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡಿದ್ದರು.

ತಪ್ಪಿತಸ್ಥ ಎಂದು ಸಾಬೀತಾದರೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆ ನೀಡಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ಪ್ರಜ್ವಲ್ ಅವರ ಚಟುವಟಿಕೆಗಳ ಬಗ್ಗೆ ನನಗೆ ತಿಳಿದಿಲ್ಲ. ಅವರ ಚಲನವಲನಗಳ ಬಗ್ಗೆ ನನಗೆ ತಿಳಿದಿಲ್ಲಎಂದು ಮಾಜಿ ಪ್ರಧಾನಿ ಪ್ರತಿಕ್ರಿಯಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ