Select Your Language

Notifications

webdunia
webdunia
webdunia
webdunia

ಹಾಸನ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟ ದೇವೇಗೌಡರಿಗೆ ಕಾಂಗ್ರೆಸಿಗರಿಂದ ಎದುರಾಗಿದೆ ಸಂಕಷ್ಟ

ಹಾಸನ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟ ದೇವೇಗೌಡರಿಗೆ ಕಾಂಗ್ರೆಸಿಗರಿಂದ ಎದುರಾಗಿದೆ ಸಂಕಷ್ಟ
ಹಾಸನ , ಬುಧವಾರ, 30 ಜನವರಿ 2019 (11:09 IST)
ಹಾಸನ : ಲೋಕಸಭಾ ಚುನಾವಣೆಗೆ ಮೈತ್ರಿ ಘೋಷಿಸಿಕೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರಗಳನ್ನು ಹಂಚಿಕೊಂಡಿದ್ದರೂ ಕೂಡ ಹಾಸನ ಕ್ಷೇತ್ರದ ವಿಚಾರದಲ್ಲಿ ಇದೀಗ ದೇವೇಗೌಡರಿಗೆ ಸಂಕಷ್ಟವೊಂದು ಎದುರಾಗಿದೆ.


ಹೌದು. ಹಾಸನ ಲೋಕಸಭಾ ಕ್ಷೇತ್ರವನ್ನು ದೇವೇಗೌಡರು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟಿದ್ದಾರೆ. ಆದರೆ ಇದೀಗ ಹಾಸನ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಕಾಂಗ್ರೆಸ್  ನಾಯಕರು ಒಪ್ಪಿಗೆ ಸೂಚಿಸಿದ್ದರೂ  ಷರತ್ತುವೊಂದನ್ನು  ಹಾಕಿದ್ದಾರೆ ಎನ್ನಲಾಗಿದೆ.


ದೇವೇಗೌಡರು ಹಾಸನದಿಂದ ಸ್ಪರ್ಧೆ ಮಾಡಿದ್ರೆ ಕಾಂಗ್ರೆಸ್ ಅಭ್ಯರ್ಥಿಗಳ ಸ್ಪರ್ಧೆ ಮಾಡಲ್ಲ. ಒಂದು ವೇಳೆ ಪ್ರಜ್ವಲ್ ರೇವಣ್ಣ ಅಥವಾ ಬೇರೆ ಯಾರೇ ಕಣಕ್ಕಿಳಿದರೆ ಬೆಂಬಲಿಸಲ, ಬದಲಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ  ಕೈ ನಾಯಕರು ಷರತ್ತು ಹಾಕಿದ್ದಾರಂತೆ. ಮೊಮ್ಮಗನಿಗಾಗಿ ಕ್ಷೇತ್ರ ಬಿಟ್ಟು ಕೊಡಲು ಹೋರಟ ದೊಡ್ಡ ಗೌಡರಿಗೆ ಇದು ಈಗ ನುಂಗಲಾರದ ತುತ್ತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯ ನಿಷೇಧಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಪ್ರತಿಭಟನೆಗೆ ಮುಂದಾದ ಮಹಿಳೆಯರು