Select Your Language

Notifications

webdunia
webdunia
webdunia
webdunia

ಸಮ್ಮಿಶ್ರ ಸರ್ಕಾರ ಉಳಿಸಲು ಮನೆಯಲ್ಲೇ ಕೂತು ದೇವೇಗೌಡರ ತಂತ್ರ

ಸಮ್ಮಿಶ್ರ ಸರ್ಕಾರ ಉಳಿಸಲು ಮನೆಯಲ್ಲೇ ಕೂತು ದೇವೇಗೌಡರ ತಂತ್ರ
ಬೆಂಗಳೂರು , ಮಂಗಳವಾರ, 18 ಸೆಪ್ಟಂಬರ್ 2018 (11:16 IST)
ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯದಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಅಪಾಯ ತಪ್ಪಿಸಲು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಮ್ಮ ನಿವಾಸದಲ್ಲಿಯೇ ತಂತ್ರಗಾರಿಕೆ ಮಾಡುತ್ತಿದ್ದಾರೆ.

ಕಾಂಗ್ರೆಸ್ ನ ಬಂಡಾಯ ಶಾಸಕರ ನಡೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿರುವ ದೇವೇಗೌಡರು ಸರ್ಕಾರ ಉಳಿಸಲು ಪ್ರತಿತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗಿದೆ.

ಈ ನಡುವೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳುತ್ತಿದ್ದು, ಅದಕ್ಕೂ ಮೊದಲು ತಮ್ಮ ಕಾವೇರಿ ನಿವಾಸದಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಜಾರಕಿಹೊಳಿ ಸಹೋದರರು ಡಿಸಿಎಂ ಸ್ಥಾನಕ್ಕೆ ಬೇಡಿಕೆ ಇಡಲಿದ್ದಾರೆ ಎನ್ನಲಾಗಿದೆ. ಅತ್ತ ಬಿಜೆಪಿ ಸರ್ಕಾರದ ನಡೆ ನೋಡಿಕೊಂಡು ಆಪರೇಷನ್ ಕಮಲ ನಡೆಸಲು ಸಿದ್ಧತೆ ನಡೆಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಬರ್ತ್ ಡೇಗೆ ಕಾಂಗ್ರೆಸ್ ಕಟ್ಟಾ ನಾಯಕ ಪ್ರಣಬ್ ಮುಖರ್ಜಿ ಮಾಡಿದ ಟ್ವೀಟ್ ವೈರಲ್!