Publish Date: Tue, 26 Apr 2016 (15:32 IST)
Updated Date: Tue, 26 Apr 2016 (15:34 IST)
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ದೇಶದ ಪ್ರಧಾನಿಯಂತಹ ಉನ್ನತ ಸ್ಥಾನಕ್ಕೇರಿರುವುದು ಪ್ರತಿಯೊಬ್ಬ ಕನ್ನಡಿಗನಿಗೆ ಹೆಮ್ಮೆ ತರುವಂತಹ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.
ಎಚ್.ಡಿ. ದೇವೇಗೌಡ ಸಮುದಾಯ ಭವನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ, ದೇವೇಗೌಡರ ಜೊತೆ ಒಟ್ಟಾಗಿ ವೇದಿಕೆ ಹಂಚಿಕೊಂಡಿರುವುದು ಕೆಲವರಲ್ಲಿ ಕುತೂಹಲ ಮೂಡಿಸಿದೆ ಎಂದರು.
1960 ರಲ್ಲಿ ನಾನು ದೇವೇಗೌಡ ಒಟ್ಟಾಗಿ ರಾಜಕೀಯಕ್ಕೆ ಬಂದಿದ್ದೇವೆ. ಮಂಡ್ಯ ಜಿಲ್ಲೆಯ ಮದ್ದೂರಿನಿಂದ ನಾನು ಶಾಸಕನಾಗಿ ಆಯ್ಕೆಯಾದರೆ, ಹಾಸನದಿಂದ ದೇವೇಗೌಡರು ಆಯ್ಕೆಯಾಗಿದ್ದರು. ಒಟ್ಟಾಗಿ ರಾಜಕಾರಣ ಮಾಡಿದ್ದೇನೆ. ಆದರೆ, ದೇವೇಗೌಡರು ಯಾವತ್ತೂ ಬದಲಾಗಲಿಲ್ಲ ಎಂದು ಹೊಗಳಿದರು.
ನಾವಿಬ್ಬರು ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿದ್ದೇವೆ. ನಮ್ಮಲ್ಲಿ ಕೆಲ ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿರಬಹುದು ಆದರೆ, ಇಬ್ಬರ ಉದ್ದೇಶ ಒಂದೇ ಆಗಿದೆ. ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ನಾವು ಕಟಿಬದ್ಧರಾಗಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು
ಡೌನ್‌ಲೋಡ್ ಮಾಡಿಕೊಳ್ಳಿ.