ಬಿಜೆಪಿ ಭದ್ರಕೋಟೆ ಶಿವಮೊಗ್ಗದಲ್ಲಿ ಸಿದ್ದರಾಮಯ್ಯ-ದೇವೇಗೌಡ ಜಂಟಿ ಪ್ರಚಾರ!

Webdunia
ಮಂಗಳವಾರ, 23 ಅಕ್ಟೋಬರ್ 2018 (09:04 IST)
ಶಿವಮೊಗ್ಗ: ಬಿಜೆಪಿ ಭದ್ರಕೋಟೆಯಾದ ಶಿವಮೊಗ್ಗ ಲೋಕಸಭೆ ಉಪಚುನಾವಣೆಗೆ ಸ್ಟಾರ್ ಕಳೆ ಬಂದಿದ್ದು, ಇಲ್ಲಿ ಜೆಡಿಎಸ್ ಗೆಲ್ಲಿಸಲು ಸಿದ್ದರಾಮಯ್ಯ ಮತ್ತು ದೇವೇಗೌಡರು ಜಂಟಿಯಾಗಿ ಪ್ರಚಾರ ಮಾಡಲಿದ್ದಾರೆ.
 

ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಲಿರುವ ದೇವೇಗೌಡರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಿದ್ದಾರೆ. ನಾಳೆಯಿಂದ ವಿದೇಶ ಪ್ರವಾಸ ಕೈಗೊಳ್ಳಲಿರುವ ದೇವೇಗೌಡರು ವಾಪಸಾದ ಬಳಿಕ ಅಕ್ಟೋಬರ್ 29 ರಂದು ಸಿದ್ದರಾಮಯ್ಯ-ದೇವೇಗೌಡರು ಜತೆಯಾಗಿ ಶಿವಮೊಗ್ಗದಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದುವರೆಗೆ ಬದ್ಧ ವೈರಿಗಳಾಗಿದ್ದ ಸಿದ್ದರಾಮಯ್ಯ-ದೇವೇಗೌಡರು ಮೊನ್ನೆಯಷ್ಟೇ ವೇದಿಕೆ ಹಂಚಿಕೊಂಡು ಅಗತ್ಯ ಬಂದರೆ ಜತೆಯಾಗಿ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಅದೇ ರೀತಿ ಇದೀಗ ಬಿಜೆಪಿ ನಾಯಕರಾದ ಬಿಎಸ್ ಯಡಿಯೂರಪ್ಪ, ಈಶ್ವರಪ್ಪ ತವರಿನಲ್ಲಿ ಬಿಜೆಪಿ ಕೋಟೆ ಬೇಧಿಸಿ ಜೆಡಿಎಸ್ ಬಾವುಟ ಹಾರಿಸಲು ಶತ ಪ್ರಯತ್ನ ನಡೆಸಲಿದ್ದಾರೆ. ಇಲ್ಲಿ ಜೆಡಿಎಸ್ ನಿಂದ ಮಧು ಬಂಗಾರಪ್ಪ ಕಣಕ್ಕಿಳಿದಿದ್ದಾರೆ. ಇನ್ನು ಬಿಜೆಪಿಯಿಂದ ಬಿಎಸ್ ವೈ ಪುತ್ರ ಬಿವೈ ರಾಘವೇಂದ್ರ ಸ್ಪರ್ಧಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments