Webdunia - Bharat's app for daily news and videos

Install App

ರಾಜಧಾನಿ ಬೆಂಗಳೂರು ನಗರ ಪ್ರದೇಶ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಕಾಲುವೆ, ರಾಜಕಾಲುವೆಗಳ ಅಭಿವೃದ್ಧಿ

Webdunia
ಮಂಗಳವಾರ, 15 ಮಾರ್ಚ್ 2022 (19:20 IST)
ರಾಜಧಾನಿ ಬೆಂಗಳೂರು ನಗರ ಪ್ರದೇಶ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಕಾಲುವೆ, ರಾಜಕಾಲುವೆಗಳ ಅಭಿವೃದ್ಧಿಗೆ ಅಮೃತ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ. ಮೀಸಲಿಟ್ಟಿದ್ದು, ಬಿಬಿಎಂಪಿ ವತಿಯಿಂದ ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಕ್ರಿಯಾ ಯೋಜನೆ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು.
ರಾಜಧಾನಿ ಬೆಂಗಳೂರು ನಗರ ಪ್ರದೇಶ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಕಾಲುವೆ, ರಾಜಕಾಲುವೆಗಳ ಅಭಿವೃದ್ಧಿಗೆ ಅಮೃತ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ. ಮೀಸಲಿಟ್ಟಿದ್ದು, ಬಿಬಿಎಂಪಿ ವತಿಯಿಂದ ಸ್ಥಳೀಯ ಅಗತ್ಯಕ್ಕನುಗುಣವಾಗಿ ಕ್ರಿಯಾ ಯೋಜನೆ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದರು.
 
ಇಂದು ಪ್ರಶ್ನೋತ್ತರ ವೇಳೆ ಶಾಸಕ ರಿಜ್ವಾನ್ ಅರ್ಷದ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಉತ್ತರಿಸಿದ ಸಚಿವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಯಲ್ಲಿ ತುಂಬಿರುವ ಹೂಳು ಮತ್ತು ಘನತ್ಯಾಜ್ಯವನ್ನು ತೆಗೆದು ಮಳೆಗಾಲದಲ್ಲಿ ಉಂಟಾಗುವ ಹಾನಿ ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಕಳೆದ ಮೂರು ವರ್ಷಗಳಲ್ಲಿ 160.85 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. 11.83 ಕಿ.ಮೀ ಉದ್ದದ ಪ್ರಥಮ, ದ್ವಿತೀಯ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿದ್ದು, ಪ್ರಸ್ತುತ 98.27 ಕಿ.ಮೀ ಉದ್ದದ ರಾಜಕಾಲುವೆ ಅಭಿವೃದ್ಧಿಪಡಿಸಲಾಗಿದೆ. ಉಳಿದ 14.56 ಕಿ.ಮೀ ಉದ್ದದ ರಾಜಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ರಾಜಕಾಲುವೆಗಳು ಹಾಳಾಗಿದ್ದು, ಸರಿಪಡಿಸಲು ಕಾಂಕ್ರೀಟ್ ಗೋಡೆ ನಿರ್ಮಾಣವಾಗುತ್ತಿದೆ. ಮಳೆ ನೀರು ಬಂದಾಗ ರಾಜಕಾಲುವೆಗಳಿಂದ ಉಂಟಾಗುವ ಹಾನಿ ತಡೆಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು, ಕಾಮಗಾರಿಗಳಲ್ಲಿ ತಾರತಮ್ಯ ಮಾಡುತ್ತಿಲ್ಲ. ಸುಮಾರು 100 ಸ್ಥಳಗಳನ್ನು ಗುರುತಿಸಲಾಗಿದ್ದು, ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲಾಗುವುದು. ಈ ಸಂಬಂಧ ಬಿಡಬ್ಲ್ಯುಎಸ್‍ಎಸ್‍ಬಿ ಜೊತೆ ಸಭೆ ನಡೆಸಲಾಗಿದೆ. ಶಿವಾಜಿನಗರ ಕ್ಷೇತ್ರ ವ್ಯಾಪ್ತಿಯ ರಾಜಕಾಲುವೆಯನ್ನು ಸುಸ್ಥಿತಿಗೆ ತರಲು ರಾಜ್ಯ ಸರ್ಕಾರ 6 ಕೋಟಿ ರೂ. ಒದಗಿಸಿದ್ದು, ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿವೆ. ಉಳಿದ ಕಾಮಗಾರಿಯನ್ನು ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments