Publish Date: Thu, 03 Sep 2020 (19:17 IST)
Updated Date: Thu, 03 Sep 2020 (19:21 IST)
ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಜೋರಾಗಿ ಸದ್ದು ಮಾಡುತ್ತಿದೆ.
ಈ ನಡುವೆ ಸ್ಯಾಂಡಲ್ ವುಡ್ ನಲ್ಲಿ ಹಲವು ನಟ, ನಟಿಯರ ಹೆಸರು ಡ್ರಗ್ಸ್ ಜಾಲದಲ್ಲಿ ಥಳಕು ಹಾಕಿಕೊಂಡಿದೆ.
ಏತನ್ಮಧ್ಯೆ, ರಾಜ್ಯವನ್ನು ಡ್ರಗ್ಸ್ ಮುಕ್ತ ಮಾಡೋದು ಖಂಡಿತ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಸ್ಪಷ್ಟವಾಗಿ ಘೋಷಣೆ ಮಾಡಿದ್ದಾರೆ.
ರಾಜಧಾನಿ ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಗಿ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಗಡಿ ಪ್ರದೇಶಗಳಲ್ಲಿಯೂ ಕಟ್ಟೆಚ್ಚರ ವಹಿಸಿ ತಪಾಸಣೆ ಬಿಗಿಗೊಳಿಸಲಾಗುತ್ತಿದೆ ಎಂದಿದ್ದಾರೆ.