ಬೆಂಗಳೂರು: ಕಚೇರಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಯುವತಿ ಜೊತೆ ಸರಸವಾಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಸಸ್ಪೆಂಡ್ ಮಾಡಿದೆ.
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ಕರ್ನಾಟಕ ಪೊಲೀಸ್ ಇಲಾಖೆಯೇ ಮುಜುಗರಪಡುವಂತಾಗಿತ್ತು. ಇದರ ಬೆನ್ನಲ್ಲೇ ಸರ್ಕಾರ ಕ್ರಮ ಕೈಗೊಂಡಿದೆ.
ಡಿಜಿಪಿ ರಾಮಚಂದ್ರ ರಾವ್ ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಗೃಹ ಇಲಾಖೆಗೆ ವರದಿ ನೀಡುವಂತೆ ಆದೇಶಿಸಿದ್ದರು. ಈ ವಿಚಾರವಾಗಿ ತಕ್ಷಣವೇ ಡಿಜಿಪಿ ತಲೆದಂಡವಾಗಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದವು.
ಇದರ ಬೆನ್ನಲ್ಲೇ ಈಗ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ವಿಚಾರಣೆಗೆ ಆದೇಶ ನೀಡಿರುವ ರಾಜ್ಯ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದೆ.