ಮಾಜಿ ಮುಖ್ಯಮಂತ್ರಿ ಧರಂಸಿಂಗ್ ನಮ್ಮನ್ನು ರಾಜಕೀಯದಿಂದ ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹುಮ್ನಾಬಾದ್ ಕಾಂಗ್ರೆಸ್ ಶಾಸಕ ರಾಜಶೇಖರ್ ಪಾಟೀಲ್ ಗಂಭೀರವಾಗಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹುಮ್ನಾಬಾದ್ ಕಾಂಗ್ರೆಸ್ ಶಾಸಕ ರಾಜಶೇಖರ್ ಪಾಟೀಲ್, ಸಚಿವ ಸಂಪುಟ ರಚನೆಯಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತಪ್ಪಿಲ್ಲ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಸಹ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಧರಂಸಿಂಗ್ ಅವರ ಪುತ್ರನನ್ನು ಚುನಾವಣೆಯಲ್ಲಿ ಗೆಲ್ಲಿಸಲು ನಾವು ಶ್ರಮಿಸಿದ್ದೇವೆ. ಆದರೆ, ಇದರಿಂದ ನಮಗೆ ಯಾವುದೇ ರೀತಿಯ ಅನುಕೂಲವಾಗಿಲ್ಲ. ಇಂದು ಮಂಡ್ಯ ಕ್ಷೇತ್ರದ ಶಾಸಕ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಭೇಟಿಯಾಗಿದ್ದೇವೆ. ಎಲ್ಲ ಅತೃಪ್ತ ಶಾಸಕರಿ ಸೇರಿ ಸಭೆ ನಡೆಸಿ ಮುಂದಿನ ನಡೆ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಶಾಸಕ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ