Select Your Language

Notifications

webdunia
webdunia
webdunia
webdunia

ಧರ್ಮಸ್ಥಳ ಬುರುಡೆ ರಹಸ್ಯ: ಮಹೇಶ್ ಶೆಟ್ಟಿ ವಿರುದ್ಧ ದಾಖಲಾಯಿತು ಮತ್ತೊಂದು ಪ್ರಕರಣ

ಮಹೇಶ್ ಶೆಟ್ಟಿ ತಿಮರೋಡಿ

Sampriya

ಬೆಳ್ತಂಗಡಿ , ಗುರುವಾರ, 18 ಸೆಪ್ಟಂಬರ್ 2025 (21:13 IST)
ಬೆಳ್ತಂಗಡಿ: ತಮ್ಮ ನಿವಾಸದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಪತ್ತೆಯಾದ ಹಿನ್ನೆಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (ಆರ್ಮ್ಸ್ ಆಕ್ಟ್) ಪ್ರಕರಣ ದಾಖಲಾಗಿದೆ. 

ಬುರುಡೆ ಚಿನ್ನಯ್ಯ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ), ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. 

ಆಗಸ್ಟ್ 26 ರಂದು, ನ್ಯಾಯಾಲಯದ ವಾರಂಟ್ ಪಡೆದು ಎಸ್‌ಐಟಿ ಅಧಿಕಾರಿಗಳ ತಂಡ ಮಹೇಶ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿದ್ದರು. 

ಈ ಕಾರ್ಯಾಚರಣೆಯ ವೇಳೆ, ಎರಡು ತಲವಾರುಗಳು ಮತ್ತು ಒಂದು ಬಂದೂಕು ಸೇರಿದಂತೆ ಒಟ್ಟು 44 ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ತನಿಖಾ ತಂಡವು ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿತ್ತು.

ಈ ಸಂಬಂಧ ಸೆ.16ರಂದು ಬೆಳ್ತಂಗಡಿ ಠಾಣೆಯಲ್ಲಿ ದೂರು ನಿಡಿದ್ದರು. 

ಈ ದೂರಿನ ಆಧಾರದ ಮೇಲೆ, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಆರ್ಮ್ಸ್ ಆಕ್ಟ್ 1959ರ ಸೆಕ್ಷನ್ 25(1), 25(1-ಎ), ಮತ್ತು 24(1-ಬಿ)(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಹಾವೇರಿ, ಅಡುಗೆ ಮಾಡುವಾಗ ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು