ಧರ್ಮಸ್ಥಳ ಬುರುಡೆ ರಹಸ್ಯ, ವಿಠಲ್ ಗೌಡ ತೋರಿಸಿದ್ದ ಮಹತ್ವದ ಸ್ಥಳದಲ್ಲಿ ಎಸ್‌ಐಟಿ

Sampriya
ಬುಧವಾರ, 17 ಸೆಪ್ಟಂಬರ್ 2025 (14:48 IST)
ಮಂಗಳೂರು:  ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ಇಂದು ಶೋಧ ಕಾರ್ಯವನ್ನು ಆರಂಭಿಸಿದೆ. 

ಸಾಕ್ಷಿ ದೂರುದಾರ ಪೊಲೀಸರಿಗೆ ತಂದೊಪ್ಪಿಸಿದ್ದ ತಲೆಬುರುಡೆಯನ್ನು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕ ಬಂಗ್ಲೆಗುಡ್ಡೆಯ ಕಾಡಿನಿಂದ ಹೊರತೆಗೆಯಲಾಗಿತ್ತು. 

 ತಲೆಬುರುಡೆವಿದ್ದ ಜಾಗಗವನ್ನು ತೋರಿಸಿದ್ದ ವಿಠಲ ಗೌಡನನ್ನು ಎಸ್ಐಟಿ ಅಧಿಕಾರಿಗಳು ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ವ್ಯಾಪ್ತಿಯಲ್ಲಿರುವ ಈ ಕಾಡಿನ ಒಳಗೆ ಈಚೆಗೆ ಕರೆದೊಯ್ದು ಮಹಜರು ನಡೆಸಿದ್ದರು. ಈ ವೇಳೆ ನೆಲದ ಮೇಲೆಯೇ ಮೃತದೇಹಗಳ ಅವಶೇಷ ಸಿಕ್ಕಿವೆ ಎನ್ನಲಾಗಿತ್ತು.

ಆ ಜಾಗದಲ್ಲಿ ಬುರುಡೆ ಸಿಕ್ಕಿದ್ದ ಸ್ಥಳದ ಮಹಜರಿಗೆ ತೆರಳಿದ್ದಾಗ ಕಾಡಿನಲ್ಲಿ ಒಂದು ಕಡೆ ಮೂರು ಮೃತದೇಹಗಳ ಹಾಗೂ ಇನ್ನೊಂದು ಕಡೆ ಎಂಟು ಮೃತದೇಹಗಳಿಗೆ ಸಂಬಂಧಿಸಿದ ಅವಶೇಷಗಳು ಕಾಣಿಸಿದ್ದವು ಎಂದು ವಿಠಲ್ ಗೌಡ ವಿಡಿಯೋ ಹೇಳಿಕೆಯಲ್ಲಿ ಹೇಳಿದ್ದ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. 

ಎಸ್‌ಐಟಿ ಅಧಿಕಾರಿಗಳು, ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ಅಧಿಕಾರಿಗಳು, ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು, ಕಙದಾಯ ಇಲಾಖೆ ಅಧಿಕಾರಿ ಹಾಗೂ ಕಾರ್ಮಿಕರನ್ನು ಒಳಗೊಂಡ ತಂಡವು ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನ ಒಳಗೆ ತೆರಳಿದೆ. ಎಸ್ಐಟಿ ಎಸ್ ಪಿಯವರಾದ ಜಿತೇಂದ್ರ ಕುಮಾರ್ ದಯಾಮ ಹಾಗೂ ಸಿ.ಎ.ಸೈಮನ್ ಅವರು ಸ್ಥಳದಲ್ಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments