ಮಂಗಳೂರು: ಧರ್ಮಸ್ಥಳದ ಸುತ್ತಾಮುತ್ತಾ ಹತ್ತಾರು ಶವಗಳನ್ನು ಹೂತಿಟ್ಟ ಆರೋಪ ಸಂಬಂಧ ಕಳೇಬರಹ ಉತ್ಖನನಕ್ಕೆ ಸತ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
ಮಾಸ್ಕ್‌ಮ್ಯಾನ್ ಗುರುತಿಸಿ 17 ಜಾಗದಲ್ಲಿ ಈಗಾಗಲೇ ಉತ್ಖನನ ಮುಗಿದ್ದು, ಅದರಲ್ಲಿ ಪಾಯಿಂಟ್ 6ರಲ್ಲಿ ಪುರುಷನ ಮೂಳೆ ಬಿಟ್ರೇ ಬೇರೆಲ್ಲೂ ಮೂಳೆ ಸಿಕ್ಕಿಲ್ಲ.
ಇದೀಗ ಧರ್ಮಸ್ಥಳ, ಬೆಳ್ತಂಗಡಿ, ವೇಣೂರು ಜೊತೆ ಉತ್ತರ ಭಾರತದ ಕಾರ್ಮಿಕರು ಕಳೇಬರಹ ಹುಡುಕುವ ಕೆಲಸ ಮಾಡಿದ್ದರು. 17 ಜಾಗದಲ್ಲಿ ಗುಂಡಿ ತೆಗೆದ ಕಾರ್ಮಿಕರನ್ನು ಇಂದು ವಿಶೇಷ ತನಿಖಾ ತಂಡ ಬೆಳ್ತಂಗಡಿ ಠಾಣೆಗೆ ಕರೆಯಿಸಿಕೊಂಡಿತ್ತು.
ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆಯ ಬೆನ್ನಲ್ಲೇ ಎಸ್‌ಐಟಿ ಪೊಲೀಸರು ಎಲ್ಲಾ ಕಾರ್ಮಿಕರನ್ನು ಕರೆಸಿ ಸಹಿ ಪಡೆದುಕೊಂಡರು. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಕರೆಸುತ್ತೇವೆ ಎಂದು ಹೇಳಿದ ಎಸ್‌ಐಟಿ ಪೊಲೀಸರು ಎಲ್ಲಾ ಕಾರ್ಮಿಕರಿಂದ ಸಹಿ ಪಡೆದು ವಾಪಾಸ್ ಕಳುಹಿಸಿದ್ದಾರೆ.
ಇನ್ನೂ ಧರ್ಮಸ್ಥಳದ ಸುತ್ತಾಮುತ್ತಾ ಹತ್ತಾರು ಶವಗಳನ್ನು ಹೂತಿಟ್ಟಿದ್ದೇನೆಂದು ದೂರು ನೀಡಿದ್ದ ಅನಾಮಿಕನನ್ನೇ ಸುಮಾರು ನಾಲ್ಕೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಮಧ್ಯಾಹ್ನ 3 ಗಂಟೆಯ ವೇಳೆಗೆ ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಸದ್ಯ ಸಾಕ್ಷಿದಾರ ವ್ಯಕ್ತಿ ಬೆಳ್ತಂಗಡಿಯ ಗೌಪ್ಯ ಸ್ಥಳದಲ್ಲಿ ವಾಸವಾಗಿದ್ದಾನೆ.